ಚಿಕ್ಕಮಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಾಧನೆಗೈದ ಪತ್ರಕರ್ತರಿಗೆ ನೀಡಲಾಗುವ ಪ್ರತಿಷ್ಠಿತ ದತ್ತಿನಿಧಿ ಹಾಗೂ ವಿಶೇಷ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಹಿರಿಯ ಪತ್ರಕರ್ತರಾದ ವಿಜಯ ಕರ್ನಾಟಕದ ಕೆ.ಎಚ್. ರುದ್ರಯ್ಯ, ಸುವರ್ಣ ನ್ಯೂಸ್‌ನ ಕಿರಣ್ ಕೆ. ಹಾಗೂ ವಿಜಯವಾಣಿಯ ಬಿ. ಉಮೇಶ್ ನಾಯಕ್ ಮಾಧ್ಯಮ ಪ್ರತಿನಿಧಿಗಳು ಕೆಯುಡಬ್ಲ್ಯುಜೆ ವಿಶೇಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ಸಾಧಕರಿಗೆ ಫಲಕ, ಪ್ರಶಸ್ತಿ ಪತ್ರ ಹಾಗೂ ₹5,000 ನಗದು ಬಹುಮಾನ ನೀಡಿ ಗೌರವಿಸಲಾಗುತ್ತದೆ. ಜುಲೈ 25ರಂದು ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಎಲ್ಲಾ ಪುರಸ್ಕೃತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು
