Wednesday, July 22, 2026
Homeಜಿಲ್ಲಾಸುದ್ದಿಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ : ತಕ್ಷಣ ಕ್ರಮಕ್ಕೆ ಜಯ ಕರ್ನಾಟಕ...

ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ : ತಕ್ಷಣ ಕ್ರಮಕ್ಕೆ ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಕುರುವಳ್ಳಿ ನಾಗರಾಜ್ ಆಗ್ರಹ

Telegram Group
Join Now

ತೀರ್ಥಹಳ್ಳಿ: ತಾಲೂಕಿನ ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ನೀಡುತ್ತಿಲ್ಲ ಎಂಬ ದೂರುಗಳು ನಿರಂತರವಾಗಿ ಕೇಳಿಬರುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರೋಗಿಗಳನ್ನು ವೈದ್ಯರು ಸರಿಯಾಗಿ ಪರಿಶೀಲನೆ ಮಾಡುತ್ತಿಲ್ಲ ಎಂಬ ಕೂಗು ಸಾರ್ವಜನಿಕರಿಂದ ಕೇಳಿಬಂದಿದೆ. ಸಾಮಾನ್ಯ ಜ್ವರ, ಕೆಮ್ಮು ಸೇರಿದಂತೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ವೈದ್ಯರು ಸಮರ್ಪಕವಾಗಿ ಪರೀಕ್ಷಿಸದೆ, ಹೊರಗಿನ ಮೆಡಿಕಲ್ ಅಂಗಡಿಗಳಿಂದ ಔಷಧಿ ಖರೀದಿಸಲು ಚೀಟಿ ಬರೆದು ಕಳುಹಿಸುತ್ತಿದ್ದಾರೆ ಎಂದು ಬಡವರು ಹಾಗೂ ಗ್ರಾಮೀಣ ಭಾಗದ ಸಾರ್ವಜನಿಕರು ದೂರಿದ್ದಾರೆ. ಇದರಿಂದ ಆರ್ಥಿಕವಾಗಿ ದುರ್ಬಲ ಕುಟುಂಬಗಳು ಅನಗತ್ಯ ವೆಚ್ಚವನ್ನು ಭರಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಯ ಕರ್ನಾಟಕ ಸಂಘಟನೆ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಕುರುವಳ್ಳಿ ನಾಗರಾಜ್ ಅವರು, ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯವೈಖರಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಕೂಡಲೇ ಪರಿಶೀಲಿಸಿ, ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ಆರೋಗ್ಯ ಸಚಿವರು ಕ್ಷೇತ್ರಕ್ಕೆ ಭೇಟಿ ನೀಡಿ ಆರೋಗ್ಯ ಸೇವೆ ಸುಧಾರಿಸುವ ಕುರಿತು ಸೂಚನೆ ನೀಡಿದ್ದರೂ, ಇನ್ನೂ ವೈದ್ಯರು ಸಾರ್ವಜನಿಕ ಸೇವೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ. ಸಚಿವರ ಭೇಟಿ ನಡೆದ ಕೆಲವೇ ದಿನಗಳಲ್ಲಿ ಇಂತಹ ದೂರುಗಳು ಕೇಳಿಬರುತ್ತಿರುವುದು ಆರೋಗ್ಯ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ತಪ್ಪಿತಸ್ಥ ವೈದ್ಯರ ವಿರುದ್ಧ ಅಗತ್ಯ ಕ್ರಮ ಕೈಗೊಂಡು, ಬಡ ಹಾಗೂ ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು. ಇಲ್ಲವಾದಲ್ಲಿ ಜಯ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಕುರುವಳ್ಳಿ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments