Wednesday, July 22, 2026
Homeಕರ್ನಾಟಕSoujanya Murder Case: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಕೊಲೆ ಕೇಸ್:‌ ಕರಣದ ಮರು ತನಿಖೆ ಬಗ್ಗೆ...

Soujanya Murder Case: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಕೊಲೆ ಕೇಸ್:‌ ಕರಣದ ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

Telegram Group
Join Now

ಮಂಗಳೂರು: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಸಿದೆ.

ಸೌಜನ್ಯ ತಾಯಿ ಕುಸುಮವತಿಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆಸಲಾಯಿತು. ವಿಚಾರಣೆ ವೇಳೆ ಸಿಬಿಐ ಅನ್ನು ತರಾಟೆಗೆ ತೆಗೆದುಕೊಂಡಿತು. ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಯಾಕೆ ಹೋಗಿಲ್ಲ ಎಂದು ಕೋರ್ಟ್ ಪ್ರಶ್ನಿಸಿತು.

ಹದಿನಾಲ್ಕು ವರ್ಷ ಆಯಿತು. ಸರಿಯಾದ ತನಿಖೆಯಾಗಿಲ್ಲ. ಸಾಕ್ಷ್ಯಗಳಿಗೆ ಭದ್ರತೆ ಮಂದುವರಿಸಿ. ಆದೇಶ ಮಾಡಿದ ಬಳಿಕ ಮಧ್ಯಂತರ ವರದಿ ಕೇಳುತ್ತೇವೆ. ಎಸ್‌ಐಟಿ ರಚನೆಯ ಬಗ್ಗೆ ನಾವು ನಿರ್ಧರಿಸುತ್ತೇವೆ ಸುಪ್ರೀಂ ಕೋರ್ಟ್ ಹೇಳಿತು.

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಲು ಸೌಜನ್ಯ ತಾಯಿ ಮನವಿ ಸಲ್ಲಿಸಿದ್ದಾರೆ. ಎಸ್‌ಐಟಿ ತನಿಖೆಗೆ ಸಹಕರಿಸಲು ಸಿದ್ಧ ಎಂದು ರಾಜ್ಯ ಸರ್ಕಾರ ತಿಳಿಸಿದೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments