Friday, July 24, 2026
Homeಕ್ರೈಮ್ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆಮತ ಮರು ಎಣಿಕೆ ಪ್ರಕರಣ: ಮತ್ತೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆಮತ ಮರು ಎಣಿಕೆ ಪ್ರಕರಣ: ಮತ್ತೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

Telegram Group
Join Now

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು  ಜುಲೈ 30ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ಹೌದು .. ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜುಲೈ 30ಕ್ಕೆ ಮುಂದೂಡಿಕೆ ಮಾಡಿದೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರು ಬಿಜೆಪಿಯ ಡಿ.ಎನ್. ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ಲೋಪವಾಗಿದೆ ಮತ್ತು ಅರ್ಹ ಮತಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಆರೋಪಿಸಿ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದರ ಬೆನ್ನಲ್ಲೇ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಲಾಗಿತ್ತು. ಏಪ್ರಿಲ್ 20ರಂದು ಆ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಮರು ಮತ ಎಣಿಕೆ ಪ್ರಕ್ರಿಯೆಗೆ ಮುಂದಾಗಿದ್ದರು. ಆ ಬಳಿಕ ಅಂಚೆ ಮತಗಳ ಮರು ಎಣಿಕೆ ನಡೆದು ಅದರಲ್ಲಿ 52 ಮತಗಳಿಂದ ಡಿ. ಎನ್‌ ಜೀವರಾಜ್‌ ಜಯಗಳಿಸಿದ್ದರು. ಆದಾದ ಬಳಿಕ ಯು.ಟಿ ಖಾದರ್‌ ಬಳಿ ಪ್ರಮಾಣ ವಚನವನ್ನು ಕೂಡ ಪಡೆದಿದ್ದರು. ನಂತರ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆಯಲ್ಲಿ ಟಿ.ಡಿ. ರಾಜೇಗೌಡರ ಶಾಸಕತ್ವವನ್ನು ತಾತ್ಕಾಲಿಕವಾಗಿ ಪುನಃ ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು.

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments