Sunday, July 26, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಪದ ಬಳಕೆ: ಸಿ.ಟಿ. ರವಿ ವಿರುದ್ದ ಕೇಸ್...

ಚಿಕ್ಕಮಗಳೂರು: ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಪದ ಬಳಕೆ: ಸಿ.ಟಿ. ರವಿ ವಿರುದ್ದ ಕೇಸ್ ದಾಖಲಿಸಿದ SDP

Telegram Group
Join Now

ಚಿಕ್ಕಮಗಳೂರು:  ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಹಾಗೂ ದ್ವೇಷ ಭಾಷಣ ಮಾಡಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ SDPI ಚಿಕ್ಕಮಗಳೂರು ಜಿಲ್ಲಾ ಸಮಿತಿಯ ವತಿಯಿಂದ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ SDPI ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಮುಸ್ತಫ ಆಲ್ದೂರು, “ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ದ್ವೇಷ ಭಾಷಣ ಮಾಡುವ ಮೂಲಕ ಧರ್ಮಗಳ ನಡುವೆ ಸಂಘರ್ಷ ಉಂಟುಮಾಡಲು ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ಸಿ.ಟಿ. ರವಿ ಅವರ ಹೇಳಿಕೆ ಖಂಡನೀಯ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಪೊಲೀಸರು ಕಾನೂನಿನ ಅನ್ವಯ ಸೂಕ್ತ ವಿಧಿಗಳಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಿಜ್ವಾನ್ ಹುಸೇನ್, ಮೊಹಮ್ಮದ್ ಮುಬಾರಕ್, ಜಿಲ್ಲಾ ಸಮಿತಿ ಸದಸ್ಯರಾದ ಸಿಕಂದರ್ ಪಾಷ, ನಾಸೀರ್ ಚಿಕ್ಕಮಗಳೂರು, ಚಿಕ್ಕಮಗಳೂರು ಕ್ಷೇತ್ರಾಧ್ಯಕ್ಷ ಅಝ್ಮತ್ ಪಾಷ, ಉಪಾಧ್ಯಕ್ಷ ಅಬ್ರಾರ್, ಕಾರ್ಯದರ್ಶಿ ಮೊಹಮ್ಮದ್ ಜೀಲಾನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಿ.ಟಿ. ರವಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸಂಸತ್ ಭವನದ ಬಳಿ ನಡೆದ ಪ್ರತಿಭಟನೆಗಳ ಕುರಿತು ವಾಗ್ದಾಳಿ ನಡೆಸುವ ವೇಳೆ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ, “ನೀಟ್ ಪರೀಕ್ಷೆಗೂ ಹಾಗೂ ಮುಲ್ಲಾಗಳಿಗೂ ಏನು ಸಂಬಂಧ, ಅವರ ಎದೆ ಸೀಳಿದರೆ ಮೂರು ಅಕ್ಷರವೂ ಇಲ್ಲ, ಅಂತಹವರು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments