ಎನ್ ಆರ್ ಪುರ: ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಡಿ ರಾಜೇಗೌಡರ ಹುಟ್ಟು ಹಬ್ಬದ ಪ್ರಯುಕ್ತ ನರಸಿಂಹರಾಜಪುರದ ಕಾಂಗ್ರೆಸ್ ಕಚೇರಿಯಲ್ಲಿ ರಕ್ತದಾನ ಶಿಬಿರವನ್ನು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಂಡಿರುವುದಾಗಿ ಬಾಳೆಹೊನ್ನೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ರತನ್ ಗೌಡ ಅರಗಿ ಅವರು ಮಾಹಿತಿ ನೀಡಿದ್ದಾರೆ.
ಈ ಸಂಧರ್ಭದಲ್ಲಿ ಬಾಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೇರ್ಬೈಲ್ ನಟರಾಜ್, ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ಗೌಡ ದಂಡಿನಮಕ್ಕಿ, ನರಸಿಂಹರಾಜಪುರ ಪಟ್ಟಣ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಹಾಗೂ ಮತ್ತಿತ್ತರಿದ್ದರು.
