ಚಿಕ್ಕಮಗಳೂರು: ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ವ್ಯಾಪ್ತಿಗೆ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಕಡೂರು, ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ, ತರೀಕೆರೆ, ಅಜ್ಜಂಪುರ ಹಾಗೂ ಕಳಸ ತಾಲ್ಲೂಕುಗಳನ್ನು ಒಳಪಡಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.
ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ರೈತರು ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಮಾಡಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.
ಅಗತ್ಯ ದಾಖಲೆಗಳು:
* ಪ್ರಸಕ್ತ ಸಾಲಿನ ಪಹಣಿ
* ಖಾತೆ ಪುಸ್ತಕ
* ಕಂದಾಯ ರಶೀದಿ
* ಆಧಾರ್ ಜೋಡಣೆಗೊಂಡ ಬ್ಯಾಂಕ್ ಪಾಸ್ ಪುಸ್ತಕ
* ಆಧಾರ್ ಕಾರ್ಡ್
* ಎಫ್ಐಡಿ ಸಂಖ್ಯೆ
ರೈತರು ಕೆಳಕಂಡ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು:
* ಬ್ಯಾಂಕ್ಗಳು
* ಡಿಜಿಟಲ್ ಸೇವಾ ಕೇಂದ್ರಗಳು
* ಸಾಮಾನ್ಯ ಸೇವಾ ಕೇಂದ್ರಗಳು (CSC)
* ಗ್ರಾಮ ಒನ್ ಕೇಂದ್ರಗಳು
ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
