Thursday, July 30, 2026
Homeಕ್ರೈಮ್Sringeri Bike Accident: ನೆಮ್ಮಾರಿನಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದಾರುಣ...

Sringeri Bike Accident: ನೆಮ್ಮಾರಿನಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದಾರುಣ ಅಂತ್ಯ!

Telegram Group
Join Now

ಶೃಂಗೇರಿ: ಲಾರಿ ಮತ್ತು ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದರ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ನೆಮ್ಮಾರ್‌ನ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಸಂಭವವಿಸಿದೆ.

ಬುಕ್ಕಡಿಬೈಲ್‌ನ ನಿವಾಸಿ ಲಿಂಗಪ್ಪ ಗೌಡ ಮೃತ ಬೈಕ್ ಚಾಲಕ. ಶೃಂಗೇರಿಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಾಚ್‌ಮನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ವೇಗವಾಗಿ ಬಂದ ಲಾರಿ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ್ದು ಲಾರಿ ಚಕ್ರಕ್ಕೆ ಸಿಲುಕಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ಸಂಬಂಧ ಶೃಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಪದೇ ಪದೇ ಅಪಘಾತವಾಗುತ್ತಿದ್ದು ಯಾವುದೇ ಸೂಚನಾ ಫಲಕಗಳು, ಪಿಡಬ್ಲ್ಯುಡಿ ರಸ್ತೆಯಿಂದ ಹೆದ್ದಾರಿಗೆ ಸೇರುವಲ್ಲಿ ಹಂಪ್ ಕೂಡ ಇಲ್ಲಇದೇ ಕಾರಣಕ್ಕೆ ಹಲವು ಅಪಘಾತ ಎಂದು ಸ್ಥಳೀಯರ ಆರೋಪ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments