ಮಲೆನಾಡಿಗೆ ಆತಂಕ ತಂದ ಕೇಂದ್ರ ಸರ್ಕಾರ
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ (ESA) ಘೋಷಣೆಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಪ್ರಕಟಿಸಿರುವ ಹೊಸ ಕರಡು ಅಧಿಸೂಚನೆ ಮಲೆನಾಡು ಭಾಗದ ಜನತೆಯಲ್ಲಿ ತೀವ್ರ ಆಘಾತ ಹಾಗೂ ಆತಂಕವನ್ನುಂಟು ಮಾಡಿದೆ.
ಈ ಅಧಿಸೂಚನೆಯಿಂದ ರೈತರ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದ್ದು, ಈ ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಉಡುಪಿ-ಚಿಕ್ಕಮಗಳೂರು ಸಂಸದರ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರತನ್ ಗೌಡ ಅರಗಿ ಕಟುಶಬ್ದಗಳಲ್ಲಿ ಎಚ್ಚರಿಸಿದ್ದಾರೆ.
ಕೇಂದ್ರ ಸರ್ಕಾರದ ಹೊಸ ಕರಡು ಅಧಿಸೂಚನೆಯ ಅನುಬಂಧ-‘ಸಿ’ ಪ್ರಕಾರ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪಶ್ಚಿಮ ಘಟ್ಟ ವ್ಯಾಪ್ತಿಯ ಸಾವಿರಾರು ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿಸುವ ಪ್ರಸ್ತಾಪ ಮಾಡಲಾಗಿದೆ ಇದರ ಬಗ್ಗೆ ಗಮನ ಹರಿಸದೆ ನಿರ್ಲಕ್ಷ ಮಾಡುತ್ತಿರುವ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಇಲ್ಲವಾದಲ್ಲಿ ರೈತರ ಮಲೆನಾಡಿಗರ ಪರ ನಿಂತು ನ್ಯಾಯ ಕೊಡಿಸುವ ಕೆಲಸ ಮಾಡಲಿ ಎಂದು ಆಗ್ರಹಿಸಿದರು
ಚಿಕ್ಕಮಗಳೂರು ಜಿಲ್ಲೆಯ 137 ಗ್ರಾಮಗಳು ಈ ಸೂಕ್ಷ್ಮ ಪ್ರದೇಶದ ಪಟ್ಟಿಯಲ್ಲಿ ಸೇರ್ಪಡೆಗೊಂಡಿವೆ. ವಿಶೇಷವಾಗಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲೂಕುಗಳ ವ್ಯಾಪ್ತಿಯ ಗ್ರಾಮಗಳು ತೀವ್ರ ಸಂಕಷ್ಟಕ್ಕೆ ಸಿಲುಕಲಿವೆ.
ಎಂದು ಆತಂಕ ವ್ಯಕ್ತಿಪಡಿಸಿದ್ದಾರೆ
ಪ್ರಸ್ತುತ ಜಾರಿಯಲ್ಲಿರುವ ಕಠಿಣ ಅರಣ್ಯ ಕಾನೂನುಗಳು ರೈತರ ಬದುಕನ್ನು ಮೂರಾಬಟ್ಟೆ ಮಾಡಿದ್ದು, ಈಗ ಆರು ಜಿಲ್ಲೆಗಳ ಸಂಸದರು ನಿದ್ದೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯ ವಾಡಿದ್ದಾರೆ.
ನರಸಿಂಹರಾಜಪುರ ತಾಲೂಕಿನ
ಅಳೆಹಳ್ಳಿ, ಬಾಳೆ, ವಗಡೆ, ಅರಳಿಕೊಪ್ಪ, ಗುಬ್ಬಿಗ,ಬೆಳ್ಳೂರು, ಬೈರಾಪುರ, ದಂಡುಬಿಟ್ಟಹಾರ, ದಾವಣ, ಗುಬ್ಬಿಗ, ಹಲಸೂರು,ಆರಂಬಳ್ಳಿ, ಹರಾವರಿ, ಹಾತುರು, ಹೆಬ್ಬೆ, ಹೊಸೂರು, ಕಡಹಿನಬೈಲು, ಕೊನೊಡಿ, ಕಾನೂರು ಕರ್ಕೇಶ್ವರ, ಕೋಣಕೆರೆ, ಕುಸುಬೂರು,ಮಡಬೂರು, ಮಲ್ಲಂದೂರು, ಮೇಗರಮಕ್ಕಿ, ಮುದುಗುಣಿ, ನಂದಿಗಾವಿ, ಸಾಲೂರು, ಸಂಕಸೆ,ಸಾರ್ಯ, ವರ್ಕಟೆ, ವಿಠಲ ಗ್ರಾಮಗಳನ್ನು ಸೇರಿಸಲಾಗಿದೆ..
ಸಾರ್ವಜನಿಕರಿಗೆ ಅವಕಾಶ ಹಾಗೂ ಮನವಿ:
ಕರಡು ಅಧಿಸೂಚನೆ ಪ್ರಕಟಗೊಂಡಿರುವುದು ಅಂತಿಮ ಘೋಷಣೆಯಲ್ಲವಾದರೂ, ಸ್ಥಳೀಯ ನಿವಾಸಿಗಳು ಎಚ್ಚೆತ್ತುಕೊಳ್ಳಬೇಕಿದೆ. ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 60 ದಿನಗಳೊಳಗೆ ಸಾರ್ವಜನಿಕರು, ರೈತರು, ಗ್ರಾಮ ಪಂಚಾಯಿತಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ತಮ್ಮ ಆಕ್ಷೇಪಣೆ, ತಿದ್ದುಪಡಿ ಸಲಹೆಗಳು ಅಥವಾ ಹೆಚ್ಚುವರಿ ಮಾಹಿತಿಯನ್ನು ಲಿಖಿತ ರೂಪದಲ್ಲಿ ಸಲ್ಲಿಸಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ.
ಆಸಕ್ತರು ತಮ್ಮ ಆಕ್ಷೇಪಣೆಗಳನ್ನು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಕಾರ್ಯದರ್ಶಿಗೆ ನೇರವಾಗಿ ಅಥವಾ esz-mef@nic.in ಇ-ಮೇಲ್ ವಿಳಾಸದ ಮೂಲಕ ಕಳುಹಿಸುವಂತೆ ರತನ್ ಗೌಡ ತಿಳಿಸಿದ್ದಾರೆ..
