Friday, July 31, 2026
Homeಜಿಲ್ಲಾಸುದ್ದಿMK Pranesh vs Gayathri Shanthegowda: ಎಂ.ಕೆ.ಪ್ರಾಣೇಶ್ & ಗಾಯತ್ರಿ ಶಾಂತೇಗೌಡ ಭವಿಷ್ಯ ಹೈಕೋರ್ಟಿನಲ್ಲಿಂದು ನಿರ್ಧಾರ!

MK Pranesh vs Gayathri Shanthegowda: ಎಂ.ಕೆ.ಪ್ರಾಣೇಶ್ & ಗಾಯತ್ರಿ ಶಾಂತೇಗೌಡ ಭವಿಷ್ಯ ಹೈಕೋರ್ಟಿನಲ್ಲಿಂದು ನಿರ್ಧಾರ!

Telegram Group
Join Now

ಚಿಕ್ಕಮಗಳೂರು:  ಎಂ.ಕೆ. ಪ್ರಾಣೇಶ್ ಮತ್ತು ಎ.ವಿ. ಗಾಯತ್ರಿ ಶಾಂತೇಗೌಡ ಅವರ  ಭವಿಷ್ಯ ಇಂದು ನಿರ್ಧಾರವಾಗಲಿದೆ. ಸ್ಥಳಿಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್‌ ಸದಸ್ಯ ಹಾಗೂ ಉಪಸಭಾಪತಿ ಎಂ.ಕೆ. ಪ್ರಾಣೇಸ್‌ ಅವರ ಚುನಾವಣೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ.

 ಚಿಕ್ಕಮಗಳೂರು ಜಿಲ್ಲೆಯಿಂದ ವಿಧಾನಪರಿಷತ್ ಸ್ಥಾನಕ್ಕೆ 2021ರ ಡಿಸೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. ಚಲಾವಣೆಯಾಗಿದ್ದ 2,410 ಮತಗಳ ಪೈಕಿ 39 ಮತಗಳು ಅಸಿಂಧುವಾಗಿದ್ದವು. ಪ್ರಾಣೇಶ್ 1,188 ಮತಗಳನ್ನು ಪಡೆದಿದ್ದರು. ಗಾಯತ್ರಿ ಶಾಂತೇಗೌಡ ಅವರು 1,182 ಮತಗಳನ್ನು ಗಳಿಸಿದ್ದರು. ಪ್ರಾಣೇಶ್ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ‘ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ ಪಟ್ಟಣ ಪಂಚಾಯತ್​ಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಅವರಿಗೆ ಮತದಾನ ಮಾಡಲು ಅವಕಾಶ ಇಲ್ಲ ಎಂದು ಗಾಯತ್ರಿ ಶಾಂತೇಗೌಡ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇಂದಿನ ತೀರ್ಪು ಚಿಕ್ಕಮಗಳೂರು ಜಿಲ್ಲೆಯ ರಾಜಕೀಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇದರ ರಾಜಕೀಯ ಪರಿಣಾಮಗಳು ಹೇಗಿರಲಿವೆ ಎಂಬುದು ಕುತೂಹಲ ಮೂಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments