Friday, July 31, 2026
Homeಕರ್ನಾಟಕKarnataka Bandh: ಕಾವೇರಿ ಹೋರಾಟಕ್ಕಾಗಿ ಆ.13 ರಂದು ಕರ್ನಾಟಕ ಬಂದ್‌ಗೆ ಕರೆ

Karnataka Bandh: ಕಾವೇರಿ ಹೋರಾಟಕ್ಕಾಗಿ ಆ.13 ರಂದು ಕರ್ನಾಟಕ ಬಂದ್‌ಗೆ ಕರೆ

Telegram Group
Join Now

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್​​ಸಿ) ಆದೇಶ ನೀಡಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿವೆ. ಇದೀಗ ಈ ಆದೇಶ ವಿರೋಧಿಸಿ ಕನ್ನಡಪರ ಹಾಗೂ ರೈತ ಸಂಘಟನೆಗಳ ಒಕ್ಕೂಟದಿಂದ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಅವರು ಬಂದ್​ ಘೋಷಣೆ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್‌ ನಾಗರಾಜ್‌, ನಮಗೆ ಇಂತಹ ಸ್ಥಿತಿ ಬರಬಾರದಿತ್ತು. ರಾಜ್ಯದಲ್ಲಿ ಬೃಹತ್ ಹೋರಾಟ ಮಾಡಬೇಕಾಗಿದೆ. ಆಗಸ್ಟ್ 13ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಅಖಂಡ ಕರ್ನಾಟಕ ಬಂದ್ ಮಾಡಲಿದ್ದೇವೆ. ರಾಜ್ಯದ ಜನ ಇದನ್ನು ವಿರೋಧಿಸಬೇಡಿ, ನೈತಿಕ ಬೆಂಬಲವೆಂದು ಹೇಳಬೇಡಿ, ಎಲ್ಲ ರೈತ ಬಾಂಧವರು ಬಂದ್‌ಗೆ ಬೆಂಬಲ ನೀಡಬೇಕು ಎಂದು ಆಗ್ರಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments