ಚಿಕ್ಕಮಗಳೂರು : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಪ್ರಕಟಗೊಂದಿಡ್ಡು ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡಗೆ ಗೆಲವು ಸಿಕ್ಕಿದ್ದು ಬಿಜೆಪಿ ಬೆಂಬಲಿತ ಎಂ.ಕೆ. ಪ್ರಾಣೇಶ್ಗೆ ಹಿನ್ನಡೆಯಾಗಿದೆ.
ಹೌದು .. ಹೈಕೋರ್ಟ್ನಲ್ಲಿ ಮರು ಮತ ಎಣಿಕೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡಗೆ 9 ಮತಗಳಿಂದ ಗೆಲುವು ಎಂದು ಹೈಕೋರ್ಟ್ ಪ್ರಕಟಿಸಿದೆ. ನ್ಯಾ.ಎಸ್.ಜಿ.ಪಂಡಿತ್ ಅವರಿಂದ ಆದೇಶ ಹೊರಡಿಸಲಾಗಿದೆ.
ಚುನಾವಣಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ಫಲಿತಾಂಶವನ್ನು ಹೈಕೋರ್ಟ್ಗೆ ಸಲ್ಲಿಸಿತ್ತು ಬಿಜೆಪಿ ಬೆಂಬಲಿತ ಎಂ.ಕೆ. ಪ್ರಾಣೇಶ್ಗೆ ಹಿನ್ನಡೆಯಾಗಿದ್ದು ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಹೈಕೋರ್ಟ್ ಅಧಿಕೃತ ಫಲಿತಾಂಶ ಪ್ರಕಟಗೊಂಡಿದೆ.
ಚಿಕ್ಕಮಗಳೂರು ಜಿಲ್ಲೆಯಿಂದ ವಿಧಾನಪರಿಷತ್ ಸ್ಥಾನಕ್ಕೆ 2021ರ ಡಿಸೆಂಬರ್ನಲ್ಲಿ ಚುನಾವಣೆ ನಡೆದಿತ್ತು. ಚಲಾವಣೆಯಾಗಿದ್ದ 2,410 ಮತಗಳ ಪೈಕಿ 39 ಮತಗಳು ಅಸಿಂಧುವಾಗಿದ್ದವು. ಪ್ರಾಣೇಶ್ 1,188 ಮತಗಳನ್ನು ಪಡೆದಿದ್ದರು. ಗಾಯತ್ರಿ ಶಾಂತೇಗೌಡ ಅವರು 1,182 ಮತಗಳನ್ನು ಗಳಿಸಿದ್ದರು. ಪ್ರಾಣೇಶ್ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ‘ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ ಪಟ್ಟಣ ಪಂಚಾಯತ್ಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಅವರಿಗೆ ಮತದಾನ ಮಾಡಲು ಅವಕಾಶ ಇಲ್ಲ ಎಂದು ಗಾಯತ್ರಿ ಶಾಂತೇಗೌಡ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಕರ್ನಾಟಕ ರಾಜಕಾರಣದಲ್ಲಿ ದೀರ್ಘಕಾಲದಿಂದ ಇಬ್ಬರ ನಡುವೆ ನಡೆಯುತ್ತಿದ್ದ ಗುದ್ದಾಟ ಇಂದಿಗೆ ತೆರೆ ಬಿದ್ದಿದ್ದು ಮುಂದಿನ ನಾಯಕತ್ವದ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯಬಿದ್ದಿದೆ.
