ಮೂಡಿಗೆರೆ: ಗೋಣಿಬೀಡು ರೋಟರಿ ಸಂಸ್ಥೆ ವತಿಯಿಂದ ಕಸ ವಿಲೇವಾರಿ ಕುರಿತು ಮಾಹಿತಿ ಕಾರ್ಯಾಗಾರ ಕಾರ್ಯಕ್ರಮವನ್ನು ಸಾರ್ವಜನಿಕರಿಗೆ ಆಯೋಜಿಸಲಾಯಿತು
ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಆಗಮಿಸಿ ಚಿತ್ರ ಪ್ರದರ್ಶನ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಪಿಡಿಒ ಸಿಂಚನ ಗೌಡ ಉದ್ಘಾಟಿಸಿ ಮಾತನಾಡಿ, ಸೇವಾ ಸಂಸ್ಥೆಗಳು ಸರ್ಕಾರಿ ಶಾಲಾ ಮಕ್ಕಳ ಕುರಿತು ಆಸಕ್ತಿ ತೋರುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಅದೆಷ್ಟೋ ಬಡ ಕುಟುಂಬಗಳ ವಿದ್ಯಾರ್ಥಿಗಳ ಶಿಕ್ಷಣಕ್ಕೆ ರೋಟರಿ ಸಂಸ್ಥೆ ಸಹಕರಿಯಾಗಿದೆ ಎಂದರು.. ಸಮಾಜ ಮುಖಿ ಕಾರ್ಯಗಳಲ್ಲಿ ಅಲ್ಲದೆ ಪರಿಸರ ಜಾಗೃತಿ ಕಸ ವಿಲೇವಾರಿ ಸಂಬಂಧಿತ ವಿಚಾರಗಳಲ್ಲಿ ಆನೇಕ ಕಾರ್ಯಕ್ರಮ ಆಯೋಜನೆ ಮಾಡಿದ ಕೀರ್ತಿ ರೋಟರಿ ಸಂಸ್ಥೆಯದು, ಸೇವಾ ಮನೋಭಾವನೆಯುಳ್ಳ ಸಂಸ್ಥೆಗಳಿಂದ ಸಮಾಜ ಬದಲಾವಣೆ ಸಾಧ್ಯ ಎಂದರು
ಕಸ ವಿಲೇವಾರಿ ಕುರಿತು ಸಾರ್ವಜನಿಕರಿಗೆ ಅನೇಕ ಮಾಹಿತಿ ನೀಡಿದರು
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗೋಣಿಬೀಡು ರೋಟರಿ ಸಂಸ್ಥೆಯ ಅಧ್ಯಕ್ಷ ನಯನ್ ರೋಟರಿ ಸಂಸ್ಥೆ ತುಂಬ ವರ್ಷದಿಂದ ಗೋಣಿಬೀಡು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಮಾಜಮುಖಿ ಸೇವೆಗಳನ್ನು ಮಾಡಿಕೊಂಡು ಬರುತಿದೆ,ಹಾಗೆ ಪರಿಸರ ಜಾಗೃತಿ ಹಾಗೂ ಕಸ ವಿಲಾವರಿ ಮತ್ತು ಮರು ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ಈ ಕಾರ್ಯಕ್ರಮ ನಡೆಸುತಿದ್ದೇವೆ ಎಂದರು.ಊರು ಹಾಗೂ ಪರಿಸರವನ್ನು
ಸ್ವಚ್ಛವಾಗಿಡುವುದು ಸರ್ಕಾರಗಳ ಕೆಲಸ ಮಾತ್ರವಲ್ಲ ಪ್ರತಿ ಸಾರ್ವಜನಿಕರ ಕರ್ತವ್ಯ ಎಂದರು,
ನಮ್ಮ ಮನೆ ಹಾಗೂ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಜೊತೆಗೆ ನಮ್ಮಿಂದ ಪರಿಸರ ಹಾಳಾಗದ ರೀತಿ ನೋಡಿಕೊಳ್ಳಬೇಕು ಎಂದರು

ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷರಾದ ನಯನ್ ಗೋಣಿಬೀಡು ಅವರನ್ನು
ಹೊಯ್ಸಳ ವಿದ್ಯಾ ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು ಹಾಗೂ ಸುಸ್ಥಿರ ಜೀವನ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು
ಈ ಕಾರ್ಯಕ್ರಮದಲ್ಲಿ ಹೊಯ್ಸಳ ವಿದ್ಯಾ ಸಂಸ್ಥೆಯ ಅಧ್ಯಕ್ಷ ಜೈರಾಮ್ ಗೌಡ, ಕಾರ್ಯದರ್ಶಿ ವಲೆಕರಟೆ ಶಿವೇಗೌಡ, ಶಾಲಾ ಮುಖ್ಯ ಶಿಕ್ಷಕಿ ವೇಣಿ, ರೋಟರಿ ಸಂಸ್ಥೆಯ ಕಾರ್ಯದರ್ಶಿ ವಿನಯ್, ಪ್ರಕಾಶ್, ಹಳೆ ವಿದ್ಯಾರ್ಥಿ ಸಂಘದ ಶಿವಕುಮಾರ್ ಸೇರಿದಂತೆ ರೋಟರಿ ಸಂಸ್ಥೆಯ ಸದಸ್ಯರುಗಳು ಹೊಯ್ಸಳ ವಿದ್ಯಾಸಂಸ್ಥೆಯ ನಿರ್ದೇಶಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು
