Monday, August 10, 2026
Homeಜಿಲ್ಲಾಸುದ್ದಿಯುವ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ: ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಯುವ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ: ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Telegram Group
Join Now

ತರೀಕೆರೆ: ಯುವ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ತರೀಕೆರೆ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ತರೀಕೆರೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ಗೌಡ ಅವರು, ರಾಷ್ಟ್ರದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಯುವಕರನ್ನು ಸಂಘಟಿಸಿ, ಅವರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಅನ್ನು ಸ್ಥಾಪಿಸಿದರು. ಅಂತಹ ಮಹತ್ವದ ಯುವ ಕಾಂಗ್ರೆಸ್‌ನ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಜನಸೇವೆಯ ಮೂಲಕ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಹೇಳಿದರು.

ಕೆಡಿಪಿ ಸದಸ್ಯರಾದ ರಚನಾ ಶ್ರೀನಿವಾಸ್ ಅವರು ಮಾತನಾಡಿ, “ಇಂದು ನಾವು ಕೇವಲ ಒಂದು ಸಂಘಟನೆಯ ಸಂಸ್ಥಾಪನಾ ದಿನವನ್ನು ಆಚರಿಸುತ್ತಿಲ್ಲ. ದೇಶದ ಯುವಜನತೆಯ ಧ್ವನಿಯಾಗಿ, ಪ್ರಜಾಪ್ರಭುತ್ವದ ರಕ್ಷಣೆಗೆ, ಸಾಮಾಜಿಕ ನ್ಯಾಯಕ್ಕಾಗಿ ಹಾಗೂ ದೇಶದ ಅಭಿವೃದ್ಧಿಗಾಗಿ ಹೋರಾಡುತ್ತಿರುವ ಮಹತ್ವದ ಯುವ ಶಕ್ತಿಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ” ಎಂದು ಹೇಳಿದರು.

ಯುವ ಕಾಂಗ್ರೆಸ್‌ನ ಕಾರ್ಯಕರ್ತರು ಆಸ್ಪತ್ರೆಯಲ್ಲಿರುವ ರೋಗಿಗಳು ಹಾಗೂ ಅವರ ಕುಟುಂಬಸ್ಥರಿಗೆ ಹಣ್ಣು ಹಂಪಲು ವಿತರಿಸಿ, ಸಮಾಜಮುಖಿ ಸೇವೆಯ ಮೂಲಕ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಿದರು.

ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಮನೋಜ್ ಕೃಷ್ಣಮೂರ್ತಿ, ತರೀಕೆರೆ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಧವನ್ ರಾಜ್ ಎಂ.ವೈ., ಮಾಜಿ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಸಂತೋಷ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಾಲಾಜಿ ಮತ್ತು ಚಂದ್ರನಾಯ್ಕ, ಪದಾಧಿಕಾರಿಗಳಾದ ಶಾಮೀರ್, ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರತನ್ ಗೌಡ ಅರಗಿ,ಮಿಥುನ್, ಪುನೀತ್, ಚಂದನ್, ವಿಜಯ್ ಎನ್ ಆರ್ ಪುರ, ಎನ್‌ಎಸ್‌ಯುಐನ ರವಿ ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments