ಹಾಸನ: ಇನ್ನೇನು ಚುನಾವಣೆಗೆ ಎರಡೇ ದಿನ ಬಾಕಿ ಇದೆ. ಈ ನಡುವೆ ಹಾಸನದಲ್ಲಿ ಬಿಜೆಪಿ ನಾಯಕರು ಸಹಕರಿಸುತ್ತಿಲ್ಲ ಎಂದು ಪ್ರೀತಂ ಗೌಡ ಬಗ್ಗೆ ಪರೋಕ್ಷವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ.
ಹಾಸನ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಮಾಜಿ ಪ್ರಧಾನಿ ದೇವೇಗೌಡರು, ಕೆಲ ಬಿಜೆಪಿ ನಾಯಕರು ಸಹಕರಿಸುತ್ತಿಲ್ಲ. ಆದರೂ ಡೋಂಟ್ ವರಿ, ಜೆಡಿಎಸ್ ಅಭ್ಯರ್ಥಿಗಳು ಗೆಲ್ತಾರೆ ಎಂದರು. ಇನ್ನು ಮಂಡ್ಯದಲ್ಲಿ ಸುಮಲತಾ ಕುಮಾರಸ್ವಾಮಿಗೆ ಸಹಾಯ ಮಾಡಿಲ್ಲ. ಆದ್ದರಿಂದ ಕುಮಾರಸ್ವಾಮಿಗೆ ಬಹಳ ಅಪಾಯ ಆಗಿಬಿಡುತ್ತೆ ಅನ್ನೋ ಹಾಗಿಲ್ಲ. ಸುಮಲತಾ ಬಗ್ಗೆ ನಾನು ಹೆಚ್ಚಿಗೆ ಮಾತನಾಡಲ್ಲ. ಜೆಡಿಎಸ್ ಅಭ್ಯರ್ಥಿಗಳು ಗೆದ್ದೇ ಗೆಲ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.