Friday, August 14, 2026
Homeಕ್ರೈಮ್ಚಿಕ್ಕಮಗಳೂರು: ಮೊರಾರ್ಜಿ ವಸತಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!

ಚಿಕ್ಕಮಗಳೂರು: ಮೊರಾರ್ಜಿ ವಸತಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!

Telegram Group
Join Now

ಚಿಕ್ಕಮಗಳೂರು: ನಗರದ ಕಲ್ಯಾಣ ನಗರದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಹೌದು .. ಆಲ್ದೂರು -ಆವತಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ನಿಶದ್‌ (14) ಆತ್ಮಹತ್ಯೆಗೆ ಯತ್ನಿಸಿರುವ ಬಾಲಕ. ಮಲಗಿದ್ದ ಕೋಣೆಯಲ್ಲಿ ಬಟ್ಟೆ ಒಣಗಿಸಲು ಕಟ್ಟಿದ ದಾರದಿಂದ ನೇಣು ಬಿಗಿದುಕೊಂಡಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ.

ಘಟನೆ ಗಮನಿಸಿದ ಇತರ ವಿದ್ಯಾರ್ಥಿಗಳು ಕೂಡಲೇ ಅವನ್ನು ರಕ್ಷಿಸಿ ಕೆಳಗಿಳಿಸಿದ್ದಾರೆ. ಗಂಭಿರ ಸ್ಥಿತಿಯಲ್ಲಿ ಬಾಲಕನ್ನು ಚಿಕ್ಕಮಗಳುರು ನಗರದ ಮಲ್ಲೇಗೌಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಕನ ಸ್ಥಿತಿ ತೀವ್ರ ಗಂಭಿರ ಸ್ಥಿತಿಯಲ್ಲಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಶಿಫ್ಟ್‌ ಮಾಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಇನ್ನೂ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡು ಮಾಹಿತಿ ಕಲೆಹಾಕುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments