Friday, August 14, 2026
Homeಜಿಲ್ಲಾಸುದ್ದಿChickmagalore: ಸ್ವಾತಂತ್ರ್ಯ ದಿನಾಚರಣೆಯಂದು ‘ಆಫ್-ರೋಡಿಂಗ್ ಅಡ್ವೆಂಚರ್ ಡ್ರೈವ್’ ಸಾಹಸಯಾತ್ರೆಗೆ ಅರಣ್ಯ ಸಚಿವರಿಂದ ಬ್ರೇಕ್!

Chickmagalore: ಸ್ವಾತಂತ್ರ್ಯ ದಿನಾಚರಣೆಯಂದು ‘ಆಫ್-ರೋಡಿಂಗ್ ಅಡ್ವೆಂಚರ್ ಡ್ರೈವ್’ ಸಾಹಸಯಾತ್ರೆಗೆ ಅರಣ್ಯ ಸಚಿವರಿಂದ ಬ್ರೇಕ್!

Telegram Group
Join Now

ಚಿಕ್ಕಮಗಳೂರು:  ಜಿಲ್ಲೆಯ ಕೊಪ್ಪ ಮತ್ತು ಕುದುರೆಮುಖ ವನ್ಯಜೀವಿ ಸಂರಕ್ಷಿತ ಪ್ರದೇಶಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು  ‘ಆಫ್-ರೋಡಿಂಗ್ ಅಡ್ವೆಂಚರ್ ಡ್ರೈವ್’ ಸಾಹಸಯಾತ್ರೆಗೆ ರಾಜ್ಯ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಭದ್ರಾ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಗಸ್ಟ್ 15ರಂದು ಕೊಪ್ಪ ತಾಲ್ಲೂಕಿನ ಜಯಪುರ ಸಮೀಪದ ಅಳಗೇಶ್ವರದಲ್ಲಿ “ಮೋಟೋ ಮೇನಿಯಾ” ಎಂಬ ಹೆಸರಿನಲ್ಲಿ ಆಫ್-ರೋಡಿಂಗ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಆದರೆ ಈ ಈವೆಂಟ್‌ನಿಂದಾಗಿ ಗ್ರಾಮೀಣ ರಸ್ತೆಗಳಿಗೆ ಹಾನಿಯಾದರೂ ಅಥವಾ ಜಲಮೂಲಗಳು ಕಲುಷಿತಗೊಂಡರೂ ಆಯೋಜಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (CEO) ಸಚಿವ ಈಶ್ವರ್ ಖಂಡ್ರೆ ಅವರು ಲಿಖಿತ ನಿರ್ದೇಶನ ನೀಡಿದ್ದಾರೆ. ಈ ಸಾಹಸ ಕೃತ್ಯವು ಯಾವುದೇ ಕಾರಣಕ್ಕೂ ಪರಿಸರಕ್ಕೆ ಮಾರಕವಾಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments