ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ ದಿಢೀರ್ ಒಡೆದು ಹೋಗಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ವತಿಯಿಂದ ತಕ್ಷಣವೇ ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.
ಕಾಮಗಾರಿ ನಡೆಯುತ್ತಿರುವುದರಿಂದ ಆಗಸ್ಟ್ 19 ಮತ್ತು 20 ರಂದು (ಬುಧವಾರ ಮತ್ತು ಗುರುವಾರ) ಎರಡು ದಿನಗಳ ಕಾಲ ನಗರದಾದ್ಯಂತ ಕುಡಿಯುವ ನೀರಿನ ಸರಬರಾಜಿನಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನೀರನ್ನು ಮಿತವಾಗಿ ಬಳಸುವುದರೊಂದಿಗೆ ನಗರಸಭೆಯೊಂದಿಗೆ ಸಹಕರಿಸಬೇಕಾಗಿ ಪೌರಾಯುಕ್ತ ಬಿ.ಸಿ. ಬಸವರಾಜು ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
