ಚಿಕ್ಕಮಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡಲು ಪ್ರವಾಸಿಗರು ಅಪಾಯಕಾರಿ ಸಾಹಸಕ್ಕೆ ಮುಂದಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ರಾಣಿ ಝರಿ ಪ್ರವಾಸಿ ತಾಣದಲ್ಲಿ ನಡೆದಿದೆ.
ಹೌದು .. ರೀಲ್ಸ್ ಗಾಗಿ ಬೆಂಗಳೂರಿನ ಡೇರ್ ಡೆವಿಲ್ ಸ್ಟಂಟ್ ಮಾಡುವ ಮೂಲಕ ಸುಮಾರು 3,000 ಅಡಿ ಆಳದ ಪ್ರಪಾತದ ಅಂಚಿನಲ್ಲೇ ವಾಹನ ಓಡಿಸಿ ಪ್ರಕೃತಿ ಸೌಂದರ್ಯ ಸವಿಯುವ ನೆಪದಲ್ಲಿ ಪ್ರವಾಸಿಗರು ತಮ್ಮ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಂಕಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಣಿ ಝರಿ ವ್ಯೂ ಪಾಯಿಂಟ್ನಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದ್ದರೂ, ಬೆಂಗಳೂರು ಮೂಲದ ಪ್ರವಾಸಿಗರು ಥಾರ್ ಜೀಪ್ ಅನ್ನು ಕೊಂಡೊಯ್ದು ರೀಲ್ಸ್ಗಾಗಿ ಅಪಾಯಕಾರಿ ರೀತಿಯಲ್ಲಿ ಓಡಿಸಿದ್ದಾರೆ. ಸ್ವಲ್ಪ ನಿಯಂತ್ರಣ ತಪ್ಪಿದರೂ ಭಾರಿ ಪ್ರಪಾತಕ್ಕೆ ಬೀಳುವ ಸಾಧ್ಯತೆಯಿತ್ತು.
