Friday, August 21, 2026
Homeಜಿಲ್ಲಾಸುದ್ದಿರಾಜೀವ್ ಗಾಂಧಿ, ದೇವರಾಜ ಅರಸು ಜನ್ಮದಿನ: ʼಕೈʼ ಕಾರ್ಯಕರ್ತರಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮದಿನ: ʼಕೈʼ ಕಾರ್ಯಕರ್ತರಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Telegram Group
Join Now

ಚಿಕ್ಕಮಗಳೂರು : ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಜನ್ಮದಿನವನ್ನು ಆಚರಿಸಲಾಯಿತು.

ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಹನೀಫ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರು ನಾಯಕರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ, ಅವರ ಜನಪರ ಸೇವೆಯನ್ನು ಸ್ಮರಿಸಲಾಯಿತು.

ಕೆಪಿಸಿಸಿ ನಿರ್ದೇಶನದ ಮೇರೆಗೆ ನಡೆದ ಜನ್ಮದಿನಾಚರಣೆ ಪ್ರಯುಕ್ತ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರು, ಜಿಲ್ಲೆಯ ವಿವಿಧ ತಾಲೂಕುಗಳ ಪ್ರಚಾರ ಸಮಿತಿ ಅಧ್ಯಕ್ಷರು, ಮೂಡಿಗೆರೆ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಕೆ.ಪಿ. ಶಿವಕುಮಾರ್ ಹಾಗೂ ಸಾಧಿಕ್ ಕೊಟ್ಟಿಗೆಹಾರ ಸೇರಿದಂತೆ ಕಾಂಗ್ರೆಸ್ ಮುಖಂಡರು ಜಿಲ್ಲಾ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿದ್ದ ರೋಗಿಗಳು ಹಾಗೂ ಬಾಣಂತಿಯರ ಆರೋಗ್ಯ ವಿಚಾರಿಸಿ, ಜನ್ಮದಿನಾಚರಣೆ ಪ್ರಯುಕ್ತ ಹಣ್ಣುಹಂಪಲು ವಿತರಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments