Friday, August 21, 2026
HomeಸಿನೆಮಾSowcar Janaki: ಇಹಲೋಕ ತ್ಯಜಿಸಿದ ಹಿರಿಯ ಮತ್ತು ಬಹುಭಾಷಾ ತಾರೆ ಸಾಹುಕಾರ್ ಜಾನಕಿ!

Sowcar Janaki: ಇಹಲೋಕ ತ್ಯಜಿಸಿದ ಹಿರಿಯ ಮತ್ತು ಬಹುಭಾಷಾ ತಾರೆ ಸಾಹುಕಾರ್ ಜಾನಕಿ!

Telegram Group
Join Now

ದಕ್ಷಿಣ ಭಾರತೀಯ ಚಿತ್ರರಂಗದ ಹಿರಿಯ ಮತ್ತು ಬಹುಭಾಷಾ ತಾರೆ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಚೆನ್ನೈನ ಆಸ್ಪತ್ರೆಯಲ್ಲಿ ಮಧ್ಯಾಹ್ನ 1:59ಕ್ಕೆ ವಿಧಿವಶರಾದರು.

ಏಳು ದಶಕಗಳ ಕಾಲ ಭಾರತೀಯ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಸಾಹುಕಾರ್ ಜಾನಕಿ(94) ಅವರು ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಬರೋಬ್ಬರಿ 400ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ತಮ್ಮ ನಟನಾ ಸಾಮರ್ಥ್ಯದಿಂದ ಚಿತ್ರರಂಗದಲ್ಲಿ ಅಪಾರ ಗೌರವ ಮತ್ತು ಅಭಿಮಾನಿಗಳನ್ನು ಸಂಪಾದಿಸಿದ್ದರು.

ಭಾರತೀಯ ಕಲೆ ಮತ್ತು ಚಿತ್ರರಂಗಕ್ಕೆ ಅವರು ನೀಡಿದ ಜೀವಮಾನದ ಕೊಡುಗೆಯನ್ನು ಪರಿಗಣಿಸಿ, ಭಾರತ ಸರ್ಕಾರವು ಅವರಿಗೆ 2022ರಲ್ಲಿ ದೇಶದ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments