Wednesday, August 26, 2026
Homeಕ್ರೈಮ್Hanur Encounter: ಹನೂರು ಎನ್‌ಕೌಂಟರ್‌ ಪ್ರಕರಣ: ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಸಲೀಂ ಆದೇಶ

Hanur Encounter: ಹನೂರು ಎನ್‌ಕೌಂಟರ್‌ ಪ್ರಕರಣ: ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಸಲೀಂ ಆದೇಶ

Telegram Group
Join Now

ಚಾಮರಾಜನಗರ/ಬೆಂಗಳೂರು: ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಸಲೀಂ ಆದೇಶ ಹೊರಡಿಸಿದ್ದಾರೆ. 4 ಎಫ್‌ಐಆರ್‌ಗಳನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ರಾಮಪುರ ಠಾಣೆಯಲ್ಲಿ ದಾಖಲಾದ ಅರಣ್ಯಾಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣ. ಹನೂರು ಠಾಣೆಯಲ್ಲಿ ದಾಖಲಾದ ಮೂವರು ಬೇಟೆಗಾರರ ಎನ್‌ಕೌಂಟರ್ ಪ್ರಕರಣ, ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಗೆ ಸೇರಿದ ವಸ್ತುಗಳಿಗೆ ಹಾನಿ, ಶಿಬಿರಗಳನ್ನು ನಾಶ ಮಾಡಿದ ಪ್ರಕರಣ, ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಅರಣ್ಯಾಧಿಕಾರಿಗಳ ಮೇಲಿನ ಹಲ್ಲೆ ಹಾಗೂ ಅರಣ್ಯ ಇಲಾಖೆ ಶಿಬಿರಗಳ ನಾಶ, ಹಾನಿ ಪ್ರಕರಣಗಳ ತನಿಖೆಯನ್ನ ಸಿಐಡಿಗೆ ವಹಿಸಿ ಆದೇಶ ಹೊರಡಿಸಲಾಗಿದೆ.

ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಆಗಸ್ಟ್ 14 ರಂದು ನಡೆಸಿದ್ದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. ಮೃತರನ್ನು ಹನೂರು ತಾಲೂಕಿನ ತೋಮಿಯರ್​ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲಾಗಿತ್ತು. ಇವರೆಲ್ಲ ಅರಣ್ಯ ಪ್ರದೇಶದಲ್ಲಿ ಕಾಡಿಗೆ ನುಗ್ಗಿ ಬೇಟೆಗಾರರು ಕಾಡುಪ್ರಾಣಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಬೇರ್ಪಡಿಸುತ್ತಿದ್ದರು ಎಂಬ ಆರೋಪವಿದ್ದು, ಆ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಜತೆ ಸಂಭವಿಸಿದ ಸಂಘರ್ಷದಲ್ಲಿ ಗುಂಡಿನ ದಾಳಿಯಲ್ಲಿ ಹತರಾಗಿದ್ದಾರೆ.

ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಆಗಸ್ಟ್ 14 ರಂದು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಶೂಟೌಟ್‌ನಲ್ಲಿ ಅಂಥೋಣಿಸಾಮಿ, ಜಾನ್ ಪೀಟರ್ ಹಾಗೂ ಡೇವಿಡ್ ಕುಮಾರ್ ಹತ್ಯೆಯಾಗಿದ್ದರು. ಈ ಮೂವರೂ ಬೇಟೆಯಾಡುವ ಉದ್ದೇಶದಿಂದಲೇ ಅರಣ್ಯದೊಳಗೆ ಪ್ರವೇಶ ಮಾಡಿದ್ದರು. ಈ ಕಾರಣಕ್ಕಾಗಿಯೇ ನಾಡ ಬಂದೂಕು ತೆಗೆದುಕೊಂಡು ಹೋಗಿದ್ದರು ಎಂದು ಅರಣ್ಯಾಧಿಕಾರಿಗಳು ಆರೋಪಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments