Friday, August 28, 2026
Homeಗ್ರೇಟರ್ ಬೆಂಗಳೂರುಡಿಕೆ ಸರ್ಕಾರದ ಮೊದಲ ವಿಕೆಟ್ ಪತನ?: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ, ಅಧಿಕೃತ ಘೋಷಣೆ...

ಡಿಕೆ ಸರ್ಕಾರದ ಮೊದಲ ವಿಕೆಟ್ ಪತನ?: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ, ಅಧಿಕೃತ ಘೋಷಣೆ ಬಾಕಿ!

Telegram Group
Join Now

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಗುರುವಾರವೇ ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಲುಪಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ರಾಜೀನಾಮೆಯನ್ನು ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಿ ಮುಂದುವರಿಯಬೇಕೇ ಎಂಬ ಗೊಂದಲದಲ್ಲಿ ಪಕ್ಷದ ವರಿಷ್ಠರು ಹಾಗೂ ನಾಯಕತ್ವವಿದ್ದು, ಈವರೆಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ನಾಗೇಂದ್ರ ಅವರು ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ನಾಯಕತ್ವದ ಮುಂದಿಟ್ಟಿದ್ದು, ಸರ್ಕಾರಕ್ಕೆ ಮುಜುಗರವಾಗದಂತೆ ಹೆಜ್ಜೆಯಿಡಲು ಮುಂದಾಗಿದ್ದಾರೆ.

ರಾಜೀನಾಮೆ ಅಂಗೀಕಾರದ ಕುರಿತು ಪಕ್ಷದ ಹೈಕಮಾಂಡ್ ಹಾಗೂ ನಾಯಕತ್ವದ ಮಟ್ಟದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿದ್ದು, ರಾಜಕೀಯ ಲಾಭ-ನಷ್ಟಗಳ ಲೆಕ್ಕಾಚಾರದ ನಂತರವೇ ಅಂತಿಮ ಘೋಷಣೆ ಹೊರಬೀಳುವ ಸಾಧ್ಯತೆಯಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments