Monday, September 7, 2026
Homeಜಿಲ್ಲಾಸುದ್ದಿದೇವರಮನೆ ದೇವಸ್ಥಾನ ಆವರಣ & ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸ್ವಚ್ಛತಾ ಅಭಿಯಾನ

ದೇವರಮನೆ ದೇವಸ್ಥಾನ ಆವರಣ & ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸ್ವಚ್ಛತಾ ಅಭಿಯಾನ

Telegram Group
Join Now

ಮೂಡಿಗೆರೆ: ತಾಲೂಕಿನ ದೇವರಮನೆ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ತೋಟಗಾರಿಕೆ ಮಹಾವಿದ್ಯಾಲಯ ಮೂಡಿಗೆರೆ NSS ಘಟಕ, ರೋಟರಿ ಕ್ಲಬ್ ಮೂಡಿಗೆರೆ ಹಾಗೂ ರೋಟರಾಕ್ಟ್ ಕ್ಲಬ್ ಮೂಡಿಗೆರೆ ಇವರ ಸಂಯುಕ್ತಾಶ್ರಯದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.

ಈ ವೇಳೆ ದೇವಸ್ಥಾನದ ಆವರಣ, ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿ, ಪ್ಲಾಸ್ಟಿಕ್ ಮುಕ್ತ, ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಮಹತ್ವದ ಬಗ್ಗೆ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ಕರೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಬಿ.ಕೆ. ದಿನೇಶ್ ಬೆಟ್ಟಗೆರೆ ಕಾರ್ಯದರ್ಶಿ ಸಂತೋಷ್ ಹಂಡುಗುಳಿ, ಸುನಿಲ್, ಆದರ್ಶ್, ಶೋಭಿತ್, ಅವಿನ್,ಯತೀಶ್, ರಂಜಿತ್ ಕೆಸವಳಲು, ದೇವಸ್ಥಾನ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ತೋಟಗಾರಿಕೆ ಮಹಾವಿದ್ಯಾಲಯ NSS ಘಟಕದ ಶಿಬಿರಾಧಿಕಾರಿ ಡಾ. ನವೀನ್ ಕುಮಾರ್ ನಾಯ್ಕ್ ಹಾಗೂ ಡಾ. ಸಂಕಲ್ಪ ಸೇರಿದಂತೆ ಶಿಬಿರಾರ್ಥಿಗಳು, ರೋಟರಾಕ್ಟ್ ಕ್ಲಬ್ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!