ಶೃಂಗೇರಿ: ಪಟ್ಟಣದ ಕುರುಬಗೇರಿ ರಸ್ತೆಯಲ್ಲಿ ಬೈಕ್ವೊಂದು ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ 65 ವರ್ಷದ ರಾಮಪ್ಪ ಎಂಬುವವರು ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಬೈಕ್ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರಾಮಪ್ಪ ಅವರನ್ನು ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆ ಕುರಿತು ಶೃಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಬೈಕ್ ಸವಾರನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
