ಕೊಪ್ಪ:ಕೊಪ್ಪ ಪೊಲೀಸ್ ಠಾಣೆ ಪಿಎಸ್‌ಐ ಮಧು ಬಿ.ಇ. ನೇತೃತ್ವದ ಪೊಲೀಸ್ ತಂಡದಿಂದ ಅಕ್ರಮ ಮರಳು ಸಾಗಾಟದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ,
ದಿನಾಂಕ 07/09/2026 ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ, ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳನ್ನು ಸಾಗಿಸುತ್ತಿದ್ದ KA-14 B-4400 ನೋಂದಣಿ ಸಂಖ್ಯೆಯ ಟಿಪ್ಪರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ತೀರ್ಥಹಳ್ಳಿ ತಾಲೂಕಿನ ದೇವಂಗಿ ಗ್ರಾಮದ ರಾಘವೇಂದ್ರ ಬಾಣಂಕ್ಕಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನು ಈ ಅಕ್ರಮ ಮರಳು ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಪುನೀತ್ ಹೊಳೆಕೊಪ್ಪ ಹಾಗೂ ಫಣಿರಾಜ್ ಕಟ್ಟೆಹಕ್ಲು ಅವರ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.
ಅಕ್ರಮ ಮರಳು ದಂಧೆಕೋರರಿಗೆ ಸಿಂಹಸ್ವಪ್ನವಾಗಿರುವ ಕೊಪ್ಪ ಪೊಲೀಸರು, ನೈಸರ್ಗಿಕ ಸಂಪನ್ಮೂಲಗಳ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಲು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ವರದಿ: ಶಶಿ ಬೆತ್ತದಕೊಳಲು
