ಹಾಸನ: ಇಟಿಎಫ್ ಮದದಲ್ಲಿದ್ದ ಒಂಟಿ ಸಲಗವೊಂದು ಅಟ್ಟಾಡಿಸಿದ ಘಟನೆ ಬೇಲೂರು ತಾಲೂಕಿನ ಗಂಗಾವರ ಗ್ರಾಮದಲ್ಲಿ ನಡೆದಿದೆ.
ಕಾಡಾನೆ ರಸ್ತೆ ದಾಟುವಾಗ ಇಟಿಎಫ್ ಸಿಬ್ಬಂದಿ ರಸ್ತೆ ಪಕ್ಕದಲ್ಲಿ ವಾಹನ ನಿಲ್ಲಿಸಿಕೊಂಡು ನಿಂತಿದ್ದರು. ಈ ವೇಳೆ ಏಕಾಏಕಿ ಕಾಡಾನೆ ಇಟಿಎಫ್ ಸಿಬ್ಬಂದಿಯನ್ನು ಅಟ್ಟಾಡಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಗಂಗಾವರ ಸುತ್ತಮುತ್ತಲ ಗ್ರಾಮಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾಡಾನೆ ರಸ್ತೆ ದಾಟುತ್ತಿದ್ದ ವೇಳೆ ಎರಡು ಕಡೆಗಳಲ್ಲಿ ಸಾರಿಗೆ ಬಸ್, ಅರಣ್ಯ ಇಲಾಖೆ ಜೀಪ್ ಸೇರಿದಂತೆ ಇತರೆ ವಾಹನಗಳನ್ನು ನಿಲ್ಲಿಸಲಾಗಿತ್ತು. ಈ ವೇಳೆ ಜನರಿದ್ದ ಕಡೆಗೆ ಒಂಟಿಸಲಗ ನುಗ್ಗಿದ್ದು ಇಟಿಎಫ್ ಸಿಬ್ಬಂದಿ ಹಾಗೂ ಜನರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.
ಕಾಡಾನೆಗಳ ಹಾವಳಿಯಿಂದ ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ಕಾಡಾನೆಗಳ ಚಲನವಲನದ ಬಗ್ಗೆ ಇಟಿಎಫ್ ಸಿಬ್ಬಂದಿ ಮೈಕ್ ಮೂಲಕ ಅನೌನ್ಸ್ ಮಾಡಿ ಸ್ಥಳೀಯರಿಗೆ ಎಚ್ಚರಿಕೆ ನೀಡುತ್ತಿದ್ದಾರೆ
