ಜಯಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಯೋಜಕತ್ವದಲ್ಲಿ ಮಂಗಳವಾರ ಹಾಗೂ ಬುಧವಾರ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ ಬಾಲಕಿಯರ ಕ್ರೀಡಾಕೂಟ ಜಯಪುರದ ಬಿಜಿಎಸ್ ಮೈದಾನದಲ್ಲಿ ನಡೆಯಿತು.
ಮೇಗುಂದ ಹೋಬಳಿ ವ್ಯಾಪ್ತಿಯ 33 ಶಾಲೆಗಳ 570ಕ್ಕೂ ಹೆಚ್ಚು ಬಾಲಕ ಬಾಲಕಿಯರು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಅಥ್ಲೆಟಿಕ್ ವಿಭಾಗದ 9 ಸ್ಪರ್ಧೆಗಳು ಹಾಗೂ ಗೇಮ್ಸ್ ವಿಭಾಗದಲ್ಲಿ 5 ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರು. ಶಿಕ್ಷಣ ಇಲಾಖೆಯ ಬಿ ಸಿ ಓ ಸುಚಿತ್ ಚಂದ್ರ, ಟಿ ಪಿ ಇ ಓ ಪ್ರಕಾಶ್, ಜಯಪುರ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ರೇವತಿ ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
9 ಜೇವೈಪಿ 2: ಜಯಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಯೋಜಕತ್ವದಲ್ಲಿ ಬುಧವಾರ ನಡೆದ ವಲಯ ಮಟ್ಟದ 14 New zealand ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸ್ಪಂದನ ಸ್ವಯಂ ಸೇವಾ ಸಂಸ್ಥೆಯ ಅಧ್ಯಕ್ಷ ಕಿಬ್ಳಿ ಪ್ರಸನ್ನಕುಮಾರ್ ಪದಕ ಹಾಗೂ ಪ್ರಶಸ್ತಿ ಪತ್ರ ವಿತರಣೆ ಮಾಡಿದರು.
ಸಾಮಾಜಿಕ ಕಾರ್ಯಕರ್ತ ಸಂದೀಪ್ ಜಲದುರ್ಗ, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ರಮೇಶ್, ಮುಖ್ಯ ಶಿಕ್ಷಕಿ ರೇವತಿ, ಶಿಕ್ಷಕಿಯರಾದ ಸುಜಾತ, ಮೇಧಿನಿ, ದೈಹಿಕ ಶಿಕ್ಷಕ ಮಂಜುನಾಥ್ ಹಾಗೂ ಇತರರಿದ್ದರು.
ವರದಿ: ಶಶಿ ಬೆತ್ತದಕೊಳಲು
