ಚಿಕ್ಕಮಗಳೂರು: ತಾಲ್ಲೂಕು ಖಾಂಡ್ಯ ಹೋಬಳಿ ಬಿದರೆ ಗ್ರಾಮ ಪಂಚಾಯಿತಿ ಅವರಣದಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಹೋರಾಟಕ್ಕೆ ಬಿದರೆ ಬ್ಯಾಡಿಗೆರೆ ಗಂಡಿ ಚಂದ್ರವಳ್ಳಿ ಗುಂಡಿಹೊಂಬಳ ಬಾಳೆಕೊಪ್ಪ ಪಟ್ನ ಕರಡಿಖಾನ್ ಉಜಿನಿ ಹೊಸಪೇಟೆ ಉಜಿನಿ ಶಿರಗೋಳದ 250 ಕ್ಕೂ ಹೆಚ್ಚು ಗ್ರಾಮಗಳ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಹಾಗೂ ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುರೇಶ್ ಪಟ್ನ ಮಾತನಾಡಿ ಕಸ್ತೂರಿ ರಂಗನ್ ವರದಿ ಜಾರಿ ಆದರೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಗ್ರಾಮಸ್ಥರಾದ ರೋಹಿತ್ ಮಾತನಾಡಿ ಮುಂದಿನ ದಿನಗಳಲ್ಲಿ ರಸ್ತೆ ಮತ್ತಿತರ ಮೂಲಭೂತ ಸೌಕರ್ಯಕ್ಕೆ ಅರಣ್ಯ ಇಲಾಖೆ ತಡೆಯೊಡ್ಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು.
ಗ್ರಾಮದ ವರ್ತಕರಾದ ಮಹೇಶರವರು ಮಾತನಾಡಿ ಕಸ್ತೂರಿ ರಂಗನ್ ವರದಿ ಜಾರಿ ಆದರೆ ಗ್ರಾಮದಲ್ಲಿ ಯಾವುದೇ ಕಾರ್ಯಕ್ರಮಗಳು ನಡೆಯಲು ಇಲಾಖೆ ಅಧಿಕಾರಿಗಳ ಅನುಮತಿ ಬೇಕಾಗುತ್ತದೆ ಎಂದು ಹೇಳಿದರು.
ಗ್ರಾಮಸ್ಥರಾದ ರಘುಪತಿ ವಿ ಸಿ ಮಾತನಾಡಿ ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಬಂದರೆ ಅದರ ತೊಂದರೆ ಇಡೀ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗುತ್ತದೆ ಹಾಗೂ ಯಾವುದೇ ಸರ್ಕಾರದ ಯೋಜನೆಗಳು ಗ್ರಾಮ ಪಂಚಾಯಿತಿಗೆ ಬಂದರೆ ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ನೀಡುವಂತಿಲ್ಲ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗುತ್ತದೆ ಎಂದು ತಿಳಿಸಿದರು
ಉದಯ್ ಪಟ್ನ ಮಾತನಾಡಿ ನಾವುಗಳು ಸುಮ್ನೆ ಕೂತರೇ ಖಾಂಡ್ಯದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಿ ಗ್ರಾಮಕ್ಕೆ ತೆರಳಲು ಅನುಮತಿ ಪಡೆದುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗುತ್ತದೆ. ಎಂದು ತಿಳಿಸಿದರು
ಶಂಕ್ರೇಗೌಡ ಉಜಿನಿ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದನ್ನು ಗಂಭೀರವಾಗಿ ತೆಗೆದುಕೊಂಡು ಹೋಗಿ ತಿರಸ್ಕಾರ ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮನವಿಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ತಬ್ರೇಜ್ ಅಹಮದ್ ರವರಿಂದ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿದರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಅಶೋಕ್ ಪಟ್ನ, ಸುರೇಶ್ ಬಿದರೆ, ಮಾಜಿ ಉಪಾಧ್ಯಕ್ಷರಾದ ಯಶೋಧ ಬಿದರೆ, ಪೂರ್ಣೇಶ್ ಉಜಿನಿ, ಗ್ರಾಮಸ್ಥರಾದ ಶಶಿಗೌಡ, ವಿನಯ್ ಉಜಿನಿ, ಜೋಯ್, ಯೋಗೇಶ್, ರಾಜು ಗುಂಡಿಹೊಂಬಳ, ಸಚಿನ್ ಬಿದರೆ, ದೇವೇಂದ್ರ ಬಿದರೆ, ಹರೀಶ್ ಬ್ಯಾಡಿಗೆರೆ, ಸಂದರ್ಶನ, ಅಭಿಷೇಕ್, ಪ್ರದೀಪ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರೂ
ವರದಿ : ದೇವೇಂದ್ರ ಗೌಡ ಬಿದರೆ
