Sunday, September 13, 2026
Homeಜಿಲ್ಲಾಸುದ್ದಿಗೌರಿ-ಗಣೇಶ ಹಬ್ಬದ ಹಿನ್ನೆಲೆ: ನಾಳೆ ಮುಳ್ಳಯ್ಯನಗಿರಿ ಸೇರಿ ಪ್ರವಾಸಿ ತಾಣಗಳಿಗೆ ನಿರ್ಬಂಧ

ಗೌರಿ-ಗಣೇಶ ಹಬ್ಬದ ಹಿನ್ನೆಲೆ: ನಾಳೆ ಮುಳ್ಳಯ್ಯನಗಿರಿ ಸೇರಿ ಪ್ರವಾಸಿ ತಾಣಗಳಿಗೆ ನಿರ್ಬಂಧ

Telegram Group
Join Now

ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತ ಸಾಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಸೆಪ್ಟೆಂಬರ್ 14ರಂದು ಒಂದು ದಿನದ ಮಟ್ಟಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸೇರಿದಂತೆ ಪ್ರಮುಖ ಗಿರಿಧಾಮಗಳಿಗೆ ಹಬ್ಬದ ದಿನದಂದು ಪ್ರವಾಸಿಗರು ತೆರಳದಂತೆ ಜಿಲ್ಲಾಡಳಿತ ಸೂಚಿಸಿದೆ.

ಗೌರಿ-ಗಣೇಶ ಚೌತಿ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ 40ಕ್ಕೂ ಹೆಚ್ಚು ಗ್ರಾಮಗಳಿಂದ ಸಾವಿರಾರು ಭಕ್ತರು ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಹಾಗೂ ಶ್ರೀ ಗುರು ನಾರುಕಂತೆ ಮಠಗಳಿಗೆ ಆಗಮಿಸಿ ಹಣ್ಣು-ಕಾಯಿ ಅರ್ಪಿಸುವುದು ಮತ್ತು ಚೌತಿ ಕಾಯಿ ಹೊಡೆಯುವ ಸಾಂಪ್ರದಾಯಿಕ ಆಚರಣೆಯಲ್ಲಿ ಪಾಲ್ಗೊಳ್ಳುತ್ತಾರೆ. ಈ ಆಚರಣೆ ಹಲವು ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದು, ಭಕ್ತರ ಧಾರ್ಮಿಕ ಕಾರ್ಯಕ್ರಮಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಹಬ್ಬದ ದಿನದಂದು ಭಕ್ತರ ವಾಹನಗಳ ಜೊತೆಗೆ ಪ್ರವಾಸಿಗರ ವಾಹನಗಳ ಸಂಖ್ಯೆಯೂ ಹೆಚ್ಚಾದರೆ ಗಿರಿಧಾಮಗಳ ರಸ್ತೆಯಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಇದರಿಂದ ಭಕ್ತರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.

ಸೆಪ್ಟೆಂಬರ್ 14ರಂದು ಗಿರಿಧಾಮಗಳಿಗೆ ಪ್ರವಾಸ ಕೈಗೊಳ್ಳಲು ಯೋಜಿಸಿರುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಮನವಿ ಮಾಡಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಸುಗಮ ಸಂಚಾರ ಹಾಗೂ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ನಿರ್ಬಂಧ ಜಾರಿಗೊಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!