ಬೆಂಗಳೂರು: ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಬರಗಾಲದ ಸ್ಥಿತಿ ಇದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರಪರಿಶೀಲನೆ ಮಾಡಿದ್ದಾರೆ. ಅದೆಷ್ಟೋ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಇದೆ. ಬೆಳೆಗಳು ಸರಿಯಾಗಿ ಆಗಿಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಹಾಗೆ ʼಕರ್ನಾಟಕದಲ್ಲಿ ಮುಂಬರುವ ದಿನಗಳಲ್ಲಿ ತೀವ್ರ ಬರದ ಪರಿಸ್ಥಿತಿ ಎದುರಾಗುವ ಸಾಧ್ಯತೆಯಿದ್ದು, ಕುಡಿಯುವ ನೀರು ಮತ್ತು ವಿದ್ಯುತ್ ಕೊರತೆಯ ಆತಂಕವೂ ಎದುರಾಗಿದೆ. ಜನರು ಇದಕ್ಕೆ ಮಾನಸಿಕವಾಗಿ ಸಿದ್ಧರಾಗಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯದ ಬರ ಪರಿಸ್ಥಿತಿಗೆ ಸಂಬಂಧಪಟ್ಟಂತೆ ಸರ್ಕಾರವೇ ವರದಿ ಸಿದ್ಧಪಡಿಸುತ್ತಿದೆ. ಕೇಂದ್ರ ಸರ್ಕಾರದ ತಂಡ ರಾಜ್ಯದ ಪರಿಸ್ಥಿತಿ ಪರಿಶೀಲಿಸುವ ಮುನ್ನ, ತಳಮಟ್ಟದ ವಾಸ್ತವ ಸ್ಥಿತಿಯನ್ನು ವರದಿ ನಿಖರವಾಗಿ ಪ್ರತಿಬಿಂಬಿಸಬೇಕು ಎಂದು ಹೇಳಿದರು. ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದ್ದರೂ ಕೆಲ ಪ್ರದೇಶಗಳಲ್ಲಿ ಮಾತ್ರ ಅಲ್ಪ ಪ್ರಮಾಣದ ಮಳೆಯಾಗಿದೆ. ಕೆಲ ಪ್ರದೇಶಗಳಲ್ಲಿ ಅಧ್ಯಯನ ಪೂರ್ಣಗೊಂಡಿದ್ದು, ವರದಿಗಳು ಬಂದಿವೆ. ಉಳಿದ ಪ್ರದೇಶಗಳ ವರದಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬರ ಪರಿಸ್ಥಿತಿ ಎದುರಿಸಲು ಜನರು ಮಾನಸಿಕವಾಗಿ ಸಿದ್ಧರಾಗಬೇಕು. ರಾಜ್ಯದಲ್ಲಿನ ಬರ ಪರಿಸ್ಥಿತಿ, ಕುಡಿಯುವ ನೀರಿನ ಪೂರೈಕೆ ಬಗ್ಗೆ ಚರ್ಚೆ ಮಾಡಲು ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದೆ. ಇದೇ ವಾರದಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆಯೂ ನಡೆಯಲಿದೆ. ರೈತರೊಂದಿಗೆ ಚರ್ಚೆ ನಡೆಸಿದ ಬಳಿಕ ಬರ ಪರಿಸ್ಥಿತಿ ನಿಭಾಯಿಸುವ ಸಂಬಂಧ ಇನ್ನಷ್ಟು ಘೋಷಣೆಗಳನ್ನ ಮಾಡಲಾಗುವುದು ಎಂದರು.
ಮುಂದಿನ ದಿನಗಳಲ್ಲಿ ವಿಪರೀತ ಬರಗಾಲ, ಕುಡಿಯುವ ನೀರಿಗೂ ತತ್ವರ, ವಿದ್ಯುಚ್ಛಕ್ತಿ ಕೊರತೆ ಬರುವ ಸಾಧ್ಯತೆಯಿದೆ, ಹಾಗೆಂದು ರೈತರು ಆತಂಕಗೊಳ್ಳುವುದು ಬೇಡ, ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಭರವಸೆಯ ಮಾತುಗಳನ್ನು ಹೇಳಿದರು.
