Wednesday, September 16, 2026
Homeಕರ್ನಾಟಕESZ ಅಧಿಸೂಚನೆಯನ್ನು ವಿರೋಧಿಸಿ ಆಕ್ಷೇಪಣೆ ಸಲ್ಲಿಸಲು ರೈತರಿಗೆ ಕರೆಕೊಟ್ಟ ವಿಶ್ವನಾಥ್ ಗದ್ದೆಮನೆ

ESZ ಅಧಿಸೂಚನೆಯನ್ನು ವಿರೋಧಿಸಿ ಆಕ್ಷೇಪಣೆ ಸಲ್ಲಿಸಲು ರೈತರಿಗೆ ಕರೆಕೊಟ್ಟ ವಿಶ್ವನಾಥ್ ಗದ್ದೆಮನೆ

Telegram Group
Join Now

ಶೃಂಗೇರಿ:  ಕಸ್ತೂರಿ ರಂಗನ್ ವರದಿ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ತೀವ್ರ ಆಕ್ರೋಶ ಹಾಗೂ ಪ್ರತಿಭಟನೆಗಳು ವ್ಯಕ್ತವಾಗುತ್ತಿವೆ. ಈ ವರದಿ ಜಾರಿಯಾದರೆ ಮಲೆನಾಡಿನ ಜನರ ಬದುಕು ಸಂಕಷ್ಟಕ್ಕೆ ಸಿಲುಕಲಿದೆ ಎಂದು ಕಳವಳ ವ್ಯಕ್ತವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಮಲೆನಾಡಿನ ರೈತರ ಕೃಷಿ, ಜೀವನೋಪಾಯ ಹಾಗೂ ಭವಿಷ್ಯದ ಮೇಲೆ ಪರಿಣಾಮ ಬೀರುವ ಕಸ್ತೂರಿರಂಗನ್ ವರದಿ ಆಧಾರಿತ ESZ ಅಧಿಸೂಚನೆಯನ್ನು ವಿರೋಧಿಸಿ ಆಕ್ಷೇಪಣೆ ಸಲ್ಲಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಅಧ್ಯಕ್ಷರಾದ ವಿಶ್ವನಾಥ್ ಗದ್ದೆಮನೆ ಅವರು ರೈತರಿಗೆ ಕರೆ ನೀಡಿದ್ದಾರೆ.

ಆಕ್ಷೇಪಣೆ ಸಲ್ಲಿಸಲು ಇರುವ ಕಾಲಾವಕಾಶ ಮುಕ್ತಾಯದ ಹಂತದಲ್ಲಿದ್ದು, ಸಮಯ ಬಹಳ ಕಡಿಮೆಯಿದೆ. ಈ ಹಿನ್ನೆಲೆಯಲ್ಲಿ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ವತಿಯಿಂದ ರೈತರು ಮೊಬೈಲ್ ಮೂಲಕವೇ ಸುಲಭವಾಗಿ ಆನ್‌ಲೈನ್ ಆಕ್ಷೇಪಣೆ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

ಆಕ್ಷೇಪಣೆ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಬಳಸಿ ಎಂದು ತಿಳಿಸಿದ್ದಾರೆ.
raithaokkuta.com/register-objection

ಮುಂದಿನ ದಿನಗಳಲ್ಲಿ ಈ ವಿಚಾರದಲ್ಲಿ ಕಾನೂನುಬದ್ಧವಾಗಿ ಹೋರಾಟ ನಡೆಸುವ ಉದ್ದೇಶವನ್ನು ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಹೊಂದಿದ್ದು, ರೈತರು ವೈಯಕ್ತಿಕವಾಗಿ ಸಲ್ಲಿಸುವ ಆಕ್ಷೇಪಣೆಗಳು ಮುಂದಿನ ಕಾನೂನು ಹೋರಾಟದಲ್ಲಿ ಅತ್ಯಂತ ಮಹತ್ವದ ದಾಖಲೆಗಳಾಗಲಿವೆ ಎಂದು ಅವರು ಜನರಿಗೆ ಮಹತ್ವದ ಸಂದೇಶ ನೀಡಿದ್ದಾರೆ.

ಸಹಾಯಕ್ಕಾಗಿ ಕರೆ ಮಾಡಿ : 9345661210 / 9342361210 ಅಥವಾ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಕಛೇರಿಗೆ ಭೇಟಿ ನೀಡಿ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!