Thursday, September 17, 2026
Homeಜಿಲ್ಲಾಸುದ್ದಿಮುಖ್ಯಮಂತ್ರಿಗಳಿಗೆ ಕಸ್ತೂರಿರಂಗನ್ ವರದಿ ಕುರಿತು ಮನವಿ ಸಲ್ಲಿಸಲು ಮುಕ್ತ ಅವಕಾಶ: ಶಾಸಕ ಟಿ.ಡಿ.ರಾಜೇಗೌಡ

ಮುಖ್ಯಮಂತ್ರಿಗಳಿಗೆ ಕಸ್ತೂರಿರಂಗನ್ ವರದಿ ಕುರಿತು ಮನವಿ ಸಲ್ಲಿಸಲು ಮುಕ್ತ ಅವಕಾಶ: ಶಾಸಕ ಟಿ.ಡಿ.ರಾಜೇಗೌಡ

Telegram Group
Join Now

ಶೃಂಗೇರಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೆಪ್ಟೆಂಬರ್ 19 ರಂದು ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರಿಗೆ ಆಗಮಿಸಲಿದ್ದಾರೆ, ಈ ವೇಳೆ ಮುಖ್ಯಮಂತ್ರಿಗಳಿಗೆ ಕಸ್ತೂರಿರಂಗನ್ ವರದಿ ಕುರಿತು ಮನವಿ ಸಲ್ಲಿಸಲು ಮುಕ್ತ ಅವಕಾಶ ಇದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಅವರು ಜನರಿಗೆ ಕರೆ ನೀಡಿದರು.

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ನೇರವಾಗಿ ಮನವಿ ರೂಪದಲ್ಲಿ ಸಲ್ಲಿಸಲು ಎಲ್ಲಾ ಸರ್ವಪಕ್ಷಗಳು, ಭಾರತೀಯ ಜನತಾ ಪಾರ್ಟಿ (ಬಿಜೆಪಿ), ಜನತಾದಳ, ಕಮ್ಯುನಿಸ್ಟ್ ಪಾರ್ಟಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಎನ್‌ಜಿಒ ಸಂಸ್ಥೆಗಳು, ರೋಟರಿ, ಲಯನ್ಸ್ ಕ್ಲಬ್‌ಗಳು, ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿ (DSS) ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಮನವಿ ಸಲ್ಲಿಸಲು ಅನುಕೂಲವಾಗುವಂತೆ ವೇದಿಕೆಯ ಪಕ್ಕದಲ್ಲಿ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗುತ್ತದೆ.ಆದ್ದರಿಂದ ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ತಮ್ಮ ಮನವಿಗಳನ್ನು ಸಲ್ಲಿಸಲು ಇಚ್ಛಿಸುವ ಎಲ್ಲಾ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!