Friday, September 18, 2026
Homeಜಿಲ್ಲಾಸುದ್ದಿಜ್ವಲಂತ ಸಮಸ್ಯೆಗಳನ್ನು ಆಲಿಸಲು ಸೆ.19ರಂದು ಬಾಳೆಹೊನ್ನೂರಿಗೆ ಡಿಕೆಶಿ ಆಗಮನ:ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಕುನ್ನಳ್ಳಿ

ಜ್ವಲಂತ ಸಮಸ್ಯೆಗಳನ್ನು ಆಲಿಸಲು ಸೆ.19ರಂದು ಬಾಳೆಹೊನ್ನೂರಿಗೆ ಡಿಕೆಶಿ ಆಗಮನ:ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಕುನ್ನಳ್ಳಿ

Telegram Group
Join Now

ಮೂಡಿಗೆರೆ : ರಾಜ್ಯದ ಹೆಮ್ಮೆಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಆಲಿಸಲು ಸೆ.19ರಂದು ಬಾಳೆಹೊನ್ನೂರಿಗೆ ಆಗಮಿಸುತ್ತಿದ್ದಾರೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಕುನ್ನಳ್ಳಿ ಹೇಳಿದರು.

ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಸ್ತೂರಿರಂಗನ್ ವರದಿ ಅನುಷ್ಠಾನದಿಂದ ಮಲೆನಾಡಿನ ಜನರು ಹಾಗೂ ಕೃಷಿಕರಿಗೆ ಎದುರಾಗುತ್ತದೆ. ಅಲ್ಲದೇ ಫಾರಂ ನಂ 50, 53, 57 ಅರ್ಜಿ ವಿಲೆ, ಜತೆಗೆ ಕಾಫಿ ಬೆಳೆಗಾರರ ಸಮಸ್ಯೆಗಳು, ಅರಣ್ಯ ಹಾಗೂ ಕಂದಾಯ ಭೂಮಿ ವಿಚಾರ, ರಸ್ತೆ ಮತ್ತು ಮೂಲಸೌಕರ್ಯ, ಕಾಡು ಪ್ರಾಣಿಗಳ ಹಾವಳಿ, ಬೆಳೆಗಳಿಗೆ ಸೂಕ್ತ ಬೆಲೆ, ಕೃಷಿ ಸಮಸ್ಯೆಗಳು ಸೇರಿದಂತೆ ಮಲೆನಾಡಿನ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸಲು ಮುಖ್ಯಮಂತ್ರಿಗಳ ಮುಂದೆ ನೇರವಾಗಿ ಮನವಿ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು.

ಗೋಣಿಬೀಡು ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಎ.ಜಿ.ಸುಬ್ರಾಯಗೌಡ ಮಾತನಾಡಿ, ಹಲವು ವರ್ಷದಿಂದ ಬಗೆಹರಿಯದೆ ಉಳಿದಿರುವ ಸಮಸ್ಯೆಗಳಿಗೆ ಸರಕಾರದಿಂದ ಶಾಶ್ವತ ಪರಿಹಾರ ದೊರೆಯಬೇಕು ಎಂಬುದು ರೈತರು ಹಾಗೂ ಬೆಳೆಗಾರರ ಪ್ರಮುಖ ನಿರೀಕ್ಷೆಯಾಗಿದೆ. ಅಲ್ಲದೇ ಜಿಲ್ಲೆಯ ಎಲ್ಲಾ ಶಾಸಕರು ಕೂಡ ಭಾಗವಹಿಸಿ ಜಿಲ್ಲೆಯ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನ ಸೆಳೆಯಲಿದ್ದಾರೆ. ಜತೆಗೆ ರೈತರು, ಬೆಳೆಗಾರರು ಹಾಗೂ ವಿವಿಧ ಪಕ್ಷಗಳ ಮುಖಂಡರು ಪಕ್ಷ ‘ಬೇಧ ಮರೆತು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಿಲ್ಲೆಯ ಸಮಸ್ಯೆಗಳನ್ನು ಮಂಡಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾ ಕೆಡಿಪಿ ಸದಸ್ಯ ಸುಧೀರ್ ಚಕ್ರಮಣಿ, ಪ.ಪಂ. ಮಾಜಿ ಉಪಾಧ್ಯಕ್ಷ ರಮೇಶ್ ಹೊಸ್ಟೆರೆ, ಮುಖಂಡರಾದ ಸುಬಹ್ಮಣ್ಯ, ರಘು ಮಗ್ಗಲಮಕ್ಕಿ, ಯಾಕೂಬ್, ಜಯಮ್ಮ, ಅನಿಲ್ ಗುತ್ತಿ, ಅರುಣ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!