ಚಿಕ್ಕಮಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ರಂಭಾಪುರಿ ಮಠದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಮಖ್ಯಮಂತ್ರಿಗಳು ಬಾಳೆಹೊನ್ನೂರಿನಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಪಟ್ಟಂತೆ ಸಭೆ ನಡೆಸುವರು.
ಆ ನಂತರ ಮಧ್ಯಾಹ್ನ 3ಗಂಟೆಗೆ ರಂಭಾಪುರಿ ಮಠದ ಆವರಣದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಬಾಳೆಹೊನ್ನೂರಿನ ರಂಭಾಪುರಿ ಮಠದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಹೆಲಿಕ್ಯಾಪ್ಟರ್‌ನಲ್ಲಿ ಆಗಮಿಸಲಿರುವ ಸಚಿವರು, ಅನಂತರ ಕಸ್ತೂರಿ ರಂಗನ್ ವರದಿಗೆ ಸಂಬಂಧಪಟ್ಟಂತೆ ನಡೆಯುವ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಮಠದ ಆವರಣದ ಹೆಲಿಪ್ಯಾಡ್‌ನಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
