ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ಹೋಗಿ ಇಂಜಿನಿಯರ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಶೃಂಗೇರಿ ಪಟ್ಟಣದ ಗಾಂಧಿ ಮೈದಾನದ ಬಳಿ ನಡೆದಿದೆ.
ಬೆಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ದರ್ಶನ್ (22) ಮೃತ ದುರ್ದೈವಿ. ನಾಲ್ಬರು ಸ್ನಾನಕ್ಕೆಂದು ತುಂಗಾ ನದಿಗೆ ಇಳಿದಿದ್ದರು ಆಳದ ಬಗ್ಗೆ ಅರಿವಿಲ್ಲದ ಕಾರಣ ದರ್ಶನ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಉಳಿದ ಮೂವರು ದಡಕ್ಕೆ ವಾಪಸ್ ಬಂದಿದ್ದಾರೆ
ಶವಕ್ಕಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬದಿಗಳಿಂದ ಶೋಧ ಕಾರ್ಯ ಮುಂದುವರೆದಿದೆ.
ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
