Monday, September 21, 2026
Homeಜಿಲ್ಲಾಸುದ್ದಿಕಸ್ತೂರಿ ರಂಗನ್ ವರದಿ ವಿರೋಧ: ಇಂದು ಶೃಂಗೇರಿ ತಾಲ್ಲೂಕು ಬಂದ್‌ಗೆ ಕರೆ, ಖಾಸಗಿ ಶಾಲೆ-ಕಾಲೇಜಿಗೂ ರಜೆ

ಕಸ್ತೂರಿ ರಂಗನ್ ವರದಿ ವಿರೋಧ: ಇಂದು ಶೃಂಗೇರಿ ತಾಲ್ಲೂಕು ಬಂದ್‌ಗೆ ಕರೆ, ಖಾಸಗಿ ಶಾಲೆ-ಕಾಲೇಜಿಗೂ ರಜೆ

Telegram Group
Join Now

ಶೃಂಗೇರಿ: ಮಲೆನಾಡಿಗೆ ಉರುಳಾಗುತ್ತಿರುವ ಕಸ್ತೂರಿರಂಗನ್ ವರದಿ 7 ನೇ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡಿನ ರೈತ ಸಂಘಟನೆಗಳು ಒಟ್ಟಾಗಿ ಹೋರಾಟಕ್ಕಿಳಿದಿದ್ದು,ಇಂದು ಶೃಂಗೇರಿ ತಾಲ್ಲೂಕು ಬಂದ್‌ಗೆ ಕರೆ ನೀಡಿದೆ.

ಕಸ್ತೂರಿರಂಗನ್ ಹೋರಾಟ ಸಮಿತಿಯು ಅಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ತಾಲ್ಲೂಕಿನಾದ್ಯಂತ ಸ್ವಯಂಪ್ರೇರಿತ ಬಂದ್‌ಗೆ ಕರೆಕೊಟ್ಟಿದ್ದು,ಎಲ್ಲಾ ಸಾರ್ವಜನಿಕರು ಅಂಗಡಿಮುಂಗಟ್ಟು,ಶಾಲಾ ಕಾಲೇಜು,ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಿ ಬಂದ್‌ಗೆ ಸಂಪೂರ್ಣ ಸಹಕಾರ ನೀಡಿ ಎಲ್ಲರೂ ಪ್ರತಿಭಟನಾ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದೆ.

ಬಂದ್ ಹಿನ್ನೆಲೆಯಲ್ಲಿ ಶೃಂಗೇರಿಯ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ. ಕೆಲವು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಪ್ರವಾಸಿಗರಲ್ಲಿಯೂ ಕೂಡ ಶೃಂಗೇರಿಗೆ ಪ್ರಯಾಣಿಸದಂತೆ ಹೋರಾಟಗಾರರು ಮನವಿ ಮಾಡಿಕೊಂಡಿದ್ದಾರೆ. ಕಸ್ತೂರಿರಂಗನ್ ವರದಿ ಜಾರಿಯ ಕುರಿತು ಜನರ ಅಭಿಪ್ರಾಯ ಸಂಗ್ರಹಿಸಲು ಸರ್ಕಾರ ಮುಂದಾಗಿರುವ ಸಂದರ್ಭದಲ್ಲಿಯೇ ಈ ಬಂದ್ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ವರದಿ ಜಾರಿಗೆ ಬಂದರೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನಸಾಮಾನ್ಯರ ಜೀವನಕ್ಕೆ ಗಂಭೀರ ಹೊಡೆತ ಬೀಳಲಿದೆ ಎಂದು ರೈತ ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ. ಈ ವರದಿಯು ಅವೈಜ್ಞಾನಿಕವಾಗಿದ್ದು, ಜನರ ಬದುಕಿಗೆ ಮಾರಕ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ವರದಿಯನ್ನು ಜಾರಿಗೊಳಿಸಬಾರದು ಎಂಬುದು ಅವರ ಪ್ರಮುಖ ಆಗ್ರಹವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!