ಚಿಕ್ಕಮಗಳೂರು: ರೌಡಿ ಶೀಟರ್ಗಳ ಜೊತೆ ಎಣ್ಣೆ ಪಾರ್ಟಿ ಮಾಡಿದ್ದ ಎಎಸ್ಐ ಅಮಾನತು ಮಾಡಿ ಎಂದು ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾಅವರು ಆದೇಶ ಹೊರಡಿಸಿದ್ದಾರೆ.
ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯ ಎಎಸ್ಐ ವೀರೇಂದ್ರ ಅವರನ್ನು ಸಸ್ಪೆಂಡ್ ಮಾಡಿ ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾ ಆದೇಶ ಹೊರಡಿಸಿದ್ದಾರೆ. ಎಎಸ್ಐ ವೀರೇಂದ್ರ ಬಾರ್ನಲ್ಲಿ ಪಾರ್ಟಿ ಆಯೋಜನೆ ಮಾಡಿ ಇಡೀ ರಾತ್ರಿ ಜೋರಾಗಿ ಹಾಡು ಹಾಕಿದ್ದರು. ಈ ಹಿನ್ನೆಲೆ ಗ್ರಾಮಸ್ಥರು ಬಾರ್ ಮುಂದೆ ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಬಾರ್ ಬಂದ್ ಮಾಡುವಂತೆ ಮಹಿಳೆಯರು ಸೇರಿದಂತೆ ನೂರಾರು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು.
ಕಡೂರು ತಾಲೂಕಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದಲ್ಲಿ ಒಂದು ವಾರದ ಹಿಂದೆ ಘಟನೆ ನಡೆದಿತ್ತು. ನಿರಂತರವಾಗಿ ದೂರು ಕೇಳಿ ಬಂದ ಹಿನ್ನೆಲೆ ಅಮಾನತು ಮಾಡಿ ಆದೇಶಿಸಲಾಗಿದೆ.
