ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಂದ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಈ ಭಾರೀ ಮಳೆಯಿಂದಾಗಿ ನಗರದ ಹಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಹಲವೆಡೆ ರಸ್ತೆಗಳು ಕೆರೆಗಳಂತೆ ಭಾಸವಾಗುತ್ತಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ತೊಂದರೆ ಅನುಭವಿಸಿದ್ದಾರೆ. ಏತನ್ಮಧ್ಯೆ ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಬೆಂಗಳೂರು ಮತ್ತು ದಕ್ಷಿಣ ಒಳನಾಡಿನ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ನೀಡಿದೆ.
ಯಶವಂತಪುರ, ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಕಾರ್ಪೋರೇಷನ್, ಮಾರ್ಕೆಟ್, ಲಾಲ್‌ಬಾಗ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
