Wednesday, September 30, 2026
Homeಕರ್ನಾಟಕBangalore Rain: ರಾಜಧಾನಿ ಬೆಂಗಳೂರಿನಲ್ಲಿ ಮುಂದುವರೆದ ವರುಣಾರ್ಭಟ: 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

Bangalore Rain: ರಾಜಧಾನಿ ಬೆಂಗಳೂರಿನಲ್ಲಿ ಮುಂದುವರೆದ ವರುಣಾರ್ಭಟ: 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

Telegram Group
Join Now

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವರುಣಾರ್ಭಟ ಮುಂದುವರಿದಿದ್ದು, ನಗರದ ಹಲವೆಡೆ  ಗುಡುಗು ಸಹಿತ ಮಳೆಯಾಗಿದೆ.

ಕಳೆದೆರಡು ದಿನಗಳಿಂದಲೂ ಸಂಜೆಯ ಬಳಿಕ ಮತ್ತು ಬೆಳಗ್ಗಿನ ಜಾವದ ವೇಳೆ ಉತ್ತಮ ಮಳೆಯಾಗಿತ್ತು. ಆದರೆ ಇಂದು ಸಂಜೆ ವೇಳೆಗೇ ವರುಣನ ಆಗಮನವಾಗಿರುವ ಕಾರಣ ವಾಹನ ಸವಾರರು ತೀವ್ರ ಪರದಾಟ ಅನುಭವಿಸಬೇಕಾಯಿತು

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಉತ್ತಮ ಮಳೆಯ ನಿರೀಕ್ಷೆಯಿದ್ದು ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ. ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!