Saturday, October 3, 2026
Homeಕ್ರೈಮ್Organ Donation: ಅಪಘಾತದಲ್ಲಿ ಬ್ರೈನ್ ಡೆಡ್: ಪುತ್ರನ ಅಂಗಾಂಗ ದಾನ ಮಾಡಿದ ಪೋಷಕರು!

Organ Donation: ಅಪಘಾತದಲ್ಲಿ ಬ್ರೈನ್ ಡೆಡ್: ಪುತ್ರನ ಅಂಗಾಂಗ ದಾನ ಮಾಡಿದ ಪೋಷಕರು!

Telegram Group
Join Now

ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಪೋಷಕರು ಸಾರ್ಥಕತೆ ಮೆರೆದಿದ್ದಾರೆ.

ಗ್ರಾಮದ ರವಿ (31) ಮೂರು ತಿಂಗಳ ಹಿಂದೆ ಪಾರಸನಹಳ್ಳಿ ಗ್ರಾಮದ ಬಳಿ ನಡೆದ ಹಿಟ್‌ & ರನ್‌ನಲ್ಲಿ ಗಂಭಿರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಅ.2 ರಂದು ಸಾವನ್ನಪ್ಪಿದ್ದರು

ಮಗನ ಸಾವಿನ ಬಳಿಕ ಪೋಷಕರು ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಬೆಂಗಳೂರಿನ ವಿಪ್ರೋ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ರವಿಕುಮಾರ್, ರಜೆ ನಿಮಿತ್ತ ಊರಿಗೆ ಬಂದಿದ್ದರು. ಜುಲೈ 6ರಂದು ಹೊಳೆನರಸೀಪುರ ತಾಲೂಕಿನ ಪರಸನಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರವಿಕುಮಾರ್ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೆಬ್ಬಾಳದಲ್ಲಿರುವ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!