Tuesday, October 6, 2026
Homeಕರ್ನಾಟಕBangalore Rain: ಬೆಂಗಳೂರಲ್ಲಿ ಮಳೆ ಅಬ್ಬರ: ರಸ್ತೆಗಳು ಜಲಾವೃತ, ಸವಾರರಿಗೆ ಸಂಕಷ್ಟ!

Bangalore Rain: ಬೆಂಗಳೂರಲ್ಲಿ ಮಳೆ ಅಬ್ಬರ: ರಸ್ತೆಗಳು ಜಲಾವೃತ, ಸವಾರರಿಗೆ ಸಂಕಷ್ಟ!

Telegram Group
Join Now

ಬೆಂಗಳೂರು: ನಗರದಲ್ಲಿ ಧಾರಾಕಾರ ಮಳೆ ಸುರಿದಿದ್ದು ಹಲವೆಡೆ ರಸ್ತೆಗಳು ಜಲಾವೃತಗೊಂಡಿದೆ. ಸಾರ್ವಜನಿಕರು ಮತ್ತು ವಾಹನ ಸವಾರರು ತೀವ್ರ ಪರದಾಡಿದ್ದಾರೆ. ರಾತ್ರಿ ಸತತ 4 ಗಂಟೆಗಳ ಕಾಲ ಅಬ್ಬರಿಸಿದ ವರುಣನ ಆರ್ಭಟಕ್ಕೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿದಿದೆ.

ನಗರದ ವಾಣಿಜ್ಯ ಕೇಂದ್ರ ಕೆ.ಆರ್. ಮಾರ್ಕೆಟ್ ರಸ್ತೆ ಕೆರೆಯ ಸ್ವರೂಪ ಪಡೆದುಕೊಂಡಿತ್ತು. ಮೊಣಕಾಲುದ್ದ ನೀರು ನಿಂತ ಪರಿಣಾಮ ವಾಹನ ಸವಾರರು ಹಾಗೂ ವ್ಯಾಪಾರಿಗಳು ಸಂಕಷ್ಟಕ್ಕೀಡಾಗಿದ್ದು, ವ್ಯಾಪಾರ ಮುಗಿಸಿ ಮನೆಗೆ ತೆರಳಲು ಹರಸಾಹಸ ಪಡಬೇಕಾಯಿತು.

ಕೆ.ಆರ್. ಪುರಂ ರೈಲ್ವೆ ಅಂಡರ್‌ಪಾಸ್ ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಅಂಡರ್‌ಪಾಸ್‌ನಲ್ಲಿ ಅಪಾಯ ಲೆಕ್ಕಿಸದೆ ನುಗ್ಗಿದ ಬೈಕ್‌ಗಳು ನೀರಿನ ನಡುವೆಯೇ ಸಿಲುಕಿಕೊಂಡಿದ್ದು, ಸವಾರರು ಪರದಾಡಿದ ದೃಶ್ಯಗಳು ಕಂಡುಬಂದವು.

ಮಳೆಯ ಅಬ್ಬರಕ್ಕೆ ನಗರದ ಬಹುತೇಕ ಕಡೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬಿಬಿಎಂಪಿ ಮತ್ತು ಸಂಚಾರ ಪೊಲೀಸರು ರಸ್ತೆಗೆ ಇಳಿದು ನೀರು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!