Wednesday, October 7, 2026
Homeಜಿಲ್ಲಾಸುದ್ದಿMLA Nayana Motamma: ಶಾಸಕಿ ನಯನಾ ಮೋಟಮ್ಮರಿಂದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರ...

MLA Nayana Motamma: ಶಾಸಕಿ ನಯನಾ ಮೋಟಮ್ಮರಿಂದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರ ವಿತರಣೆ

Telegram Group
Join Now

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ಅಂಗನವಾಡಿ ಕೇಂದ್ರಗಳಿಗೆ ಆಯ್ಕೆಯಾಗಿರುವ ನೂತನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಶಾಸಕಿ ನಯನಾ ಮೋಟಮ್ಮ ಅವರು ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕಮಗಳೂರು
ಶಿಶು ಅಭಿವೃದ್ಧಿ ಯೋಜನೆ, ಮೂಡಿಗೆರೆ ಮತ್ತು ಚಿಕ್ಕಮಗಳೂರು ಇವರ ವತಿಯಿಂದ 2026-27ನೇ ಸಾಲಿನಲ್ಲಿ ಮೂಡಿಗೆರೆ, ಕಳಸ ಚಿಕ್ಕಮಗಳೂರು ತಾಲೂಕಿನಿಂದ ಆಯ್ಕೆಯಾದ ಇಬ್ಬರು ಅಂಗನವಾಡಿ ಕಾರ್ಯಕರ್ತರು ಮತ್ತು 48 ಜನ ಅಂಗನವಾಡಿ ಸಹಾಯಕಿಯರಿಗೆ ನೇಮಕಾತಿ ಆದೇಶ ಪ್ರತಿಯನ್ನು ಸಿಡಿಪಿಒ ಕಚೇರಿಯಲ್ಲಿ ವಿತರಿಸಲಾಯಿತು

ಬಳಿಕ ಮಾತನಾಡಿ ನೂತನವಾಗಿ ಆಯ್ಕೆಯಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಶುಭಾಶಯ ಕೋರಿದ ಅವರು ಅಂಗನವಾಡಿ ಕೇಂದ್ರಗಳು ಮಕ್ಕಳ ಭವಿಷ್ಯ ಆರೋಗ್ಯ, ಪೋಷಣೆ ಹಾಗೂ ಪ್ರಾಥಮಿಕ ಶಿಕ್ಷಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದರು.

ಮಾತೆಯರು ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಯ ಕಾಳಜಿ ವಹಿಸುವುದರ ಜೊತೆಗೆ, ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವ ಜವಾಬ್ದಾರಿ ಅಂಗನವಾಡಿ ಸಿಬ್ಬಂದಿಯ ಮೇಲಿದೆ. ನೂತನವಾಗಿ ನೇಮಕಗೊಂಡಿರುವ ಎಲ್ಲರೂ ತಮ್ಮ ಕರ್ತವ್ಯವನ್ನು ಜವಾಬ್ದಾರಿ ಹಾಗೂ ಬದ್ಧತೆಯಿಂದ ನಿರ್ವಹಿಸಬೇಕು ಎಂದು ಅವರು ಸಲಹೆ ನೀಡಿದರು.

ನಿಮ್ಮ ಸೇವೆ ನಮ್ಮ ಕ್ಷೇತ್ರದ ಪ್ರತಿಯೊಂದು ಮಗುವಿನ ಉತ್ತಮ ಆರೋಗ್ಯ, ಬೆಳವಣಿಗೆ ಹಾಗೂ ಭವಿಷ್ಯ ರೂಪಿಸಲು ನೆರವಾಗಲಿ. ಮಕ್ಕಳೊಂದಿಗೆ ಹಾಗೂ ತಾಯಂದಿರೊಂದಿಗೆ ಆತ್ಮೀಯವಾಗಿ ಕಾರ್ಯನಿರ್ವಹಿಸಿ, ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಪ್ರಾಮಾಣಿಕೆವಾಗಿ ಶ್ರಮಿಸಬೇಕು ಎಂದರು

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಕೃಷ್ಣಪ್ಪ, ಇಲಾಖೆಯ ಅಧಿಕಾರಿಗಳು,ವಿವಿಧ ಗ್ರಾಮಗಳ ಮುಖಂಡರು, ಗ್ರಾಮಸ್ಥರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!