Thursday, October 8, 2026
Homeಗ್ರೇಟರ್ ಬೆಂಗಳೂರುಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರ ಯತ್ನ: ಡಿಕೆಶಿ ಸ್ಫೋಟಕ ಆರೋಪ

ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರ ಯತ್ನ: ಡಿಕೆಶಿ ಸ್ಫೋಟಕ ಆರೋಪ

Telegram Group
Join Now

ಬೆಂಗಳೂರು: ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಫೋಟಕ ಆರೋಪ ಮಾಡಿದ್ದಾರೆ.

ಹೌದು .. ಸಚಿವರ ಟ್ರ್ಯಾಪ್‌ಗೆ  ಯತ್ನ ನಡೆಯುತ್ತಿದೆ, ಹುಷಾರಾಗಿರಿ ಎಂದು ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್  ಎಚ್ಚರಿಕೆಯ ಸಂದೇಶವನ್ನು ಸಚಿವ ಸಂಪುಟ ಸಭೆಯಲ್ಲೇ ಎಚ್ಚರಿಕೆ ನೀಡಿದ್ದರು.

ಅದರ ಬಗ್ಗೆ ಇಂದು ಸಹ ಪ್ರತಿಕ್ರಿಯೆ ನೀಡದ ಅವರು, ತಮ್ಮ ಬಳಿ ಈ ಬಗ್ಗೆ ಎಲ್ಲ ಮಾಹಿತಿಯೂ ಇದೆ. ತಮ್ಮ ಬಳಿ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ ಎಂದಿರುವ ಡಿಕೆ ಶಿವಕುಮಾರ್, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ತಮಗೆ ಗೊತ್ತಿದೆ ಎಂದು ಹೇಳಿದ್ದಾರೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ ಎಂದು ಹೇಳಿದರು.

ಹಾಗೆ ಈ ಅಕ್ರಮದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಕೆಲವು ನಾಯಕರೇ ಭಾಗಿಯಾಗಿದ್ದಾರೆ ಎಂಬ ಆರೋಪವನ್ನೂ ಡಿ.ಕೆ. ಶಿವಕುಮಾರ್ ಮಾಡಿದ್ದಾರೆ. ತಮ್ಮ ಹೆಸರು ಬಯಲಿಗೆ ಬರುತ್ತದೆ ಎಂಬ ಕಾರಣಕ್ಕೆ ತನಿಖೆ ಬೇಡ ಎನ್ನುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿ ಕುಳಿತಿರುವುದರಿಂದ ಸುಮ್ಮನೆ ಮಾತನಾಡುವುದಿಲ್ಲ. ಎಲ್ಲ ಸಾಕ್ಷ್ಯಾಧಾರಗಳಿವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮವರು ಎಚ್ಚರಿಕೆಯಿಂದ ಇರಬೇಕೆಂದು ಸೂಚನೆ ನೀಡಿದ್ದೇನೆ ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!