Thursday, October 8, 2026
Homeಸಿನೆಮಾನಾನಾ ಪಾಟೇಕರ್ ಅವರ ನಿಧನದ ಸುದ್ದಿ ಅತ್ಯಂತ ದುಃಖ ತಂದಿದೆ: ಸಿಎಂ ಡಿಕೆಶಿ, ಖರ್ಗೆ ,...

ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಅತ್ಯಂತ ದುಃಖ ತಂದಿದೆ: ಸಿಎಂ ಡಿಕೆಶಿ, ಖರ್ಗೆ , ಬೊಮ್ಮಾಯಿ ಸೇರಿ ರಾಜಕೀಯ ಮುಖಂಡರಿಂದ ಸಂತಾಪ

Telegram Group
Join Now

ಹಿರಿಯ ನಟ ನಾನಾ ಪಾಟೇಕರ್ ತಮ್ಮ 75ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ಪುತ್ರ ಮಲ್ಹಾರ್ ಪಾಟೇಕರ್ ಖಚಿತಪಡಿಸಿದ್ದಾರೆ. ಜನಪ್ರಿಯ ತಾರೆಯ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಿಎಂ ಡಿ.ಕೆ. ಶಿವಕುಮಾರ್ ಸಂತಾಪ: ”ಬಹುಭಾಷಾ ನಟ, ಪದ್ಮಶ್ರೀ ಪುರಸ್ಕೃತ, ಅದ್ಭುತ ಕಲಾವಿದ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಅತ್ಯಂತ ದುಃಖ ತಂದಿದೆ. ತಮ್ಮ ವಿಭಿನ್ನ ಹಾಗೂ ಮನೋಜ್ಞ ಅಭಿನಯದ ಮೂಲಕ ಭಾರತೀಯ ಚಿತ್ರರಂಗದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದ ಅವರು, ಕನ್ನಡದ ಯಕ್ಷ ಚಿತ್ರದಲ್ಲಿಯೂ ಅಭಿನಯಿಸಿದ್ದರು. ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ, ಬಂಧು-ಬಳಗ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

”ಖ್ಯಾತ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿಯಿಂದ ತೀವ್ರ ದುಃಖವಾಗಿದೆ. ಅಪಾರ ಪ್ರತಿಭೆಯ ಆಗರವಾಗಿರುವ ಅವರ ಅದ್ಭುತ ಅಭಿನಯ, ವಿಶಿಷ್ಟ ಸಂಭಾಷಣಾ ಶೈಲಿ ಮತ್ತು ಭಾರತೀಯ ಚಿತ್ರರಂಗಕ್ಕೆ ಅವರು ನೀಡಿದ ಅಪಾರ ಕೊಡುಗೆಯು ಹಲವಾರು ತಲೆಮಾರುಗಳ ಪ್ರೇಕ್ಷಕರ ಮನಸ್ಸಿನಲ್ಲಿ ಅಳಿಸಲಾಗದ ಛಾಪನ್ನು ಮೂಡಿಸಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಡಿಸಿಎಂ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

‘ಖ್ಯಾತ ನಟ ನಾನಾ ಪಾಟೇಕರ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅದ್ಭುತ ಅಭಿನಯ, ಭಾರತೀಯ ಚಿತ್ರರಂಗಕ್ಕೆ ಅವರು ನೀಡಿದ ಅಪಾರ ಹಾಗೂ ವೈವಿಧ್ಯಮಯ ಕೊಡುಗೆ ಹಾಗೂ ರೈತರು ಮತ್ತು ನಿರ್ಗತಿಕರ ಬಗೆಗಿನ ಅವರ ಕರುಣಾಭಾವ ಸದಾ ಸ್ಮರಣೀಯವಾಗಿ ಉಳಿಯುತ್ತದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು” ಎಂದು ಖರ್ಗೆ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!