ಚಿಕ್ಕಮಗಳೂರು: ವಾಹನಗಳನ್ನು ಭೌತಿಕವಾಗಿ ಪರಿಶೀಲಿಸದೇ ಫಿಟ್ನೆಸ್ ಸರ್ಟಿಫಿಕೇಟ್ (FC) ನೀಡಿರುವ ಆರೋಪ ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಕೇಳಿಬಂದಿದೆ.
ಹೌದು .. ಯವುದೇ ತಪಾಸಣೆ ನಡೆಸದೇ 2023ರಿಂದ 2025ರವರೆಗೆ 13,600ಕ್ಕೂ ಹೆಚ್ಚು ವಾಹನಗಳಿಗೆ ನಿಯಮ ಉಲ್ಲಂಘಿಸಿ ಎಫ್ಸಿ ನೀಡಲಾಗಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಮೋಟಾರು ವಾಹನ ನಿರೀಕ್ಷಕ ಜಗದೀಶ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಾದೇಶಿಕ ಸಾರಿಗೆ ಅಧಿಕಾರಿ (ಪ್ರಭಾರ) ರಾಕೇಶ್ ಕುಮಾರ್ ನೀಡಿದ ದೂರಿನ ಆಧಾರದಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋವಾ, ಮಹಾರಾಷ್ಟ್ರ, ಹರಿಯಾಣ ಮತ್ತು ಪಂಜಾಬ್ ಸೇರಿದಂತೆ ಹೊರರಾಜ್ಯಗಳಲ್ಲಿ ನೋಂದಣಿಯಾಗಿರುವ ವಾಹನಗಳಿಗೆ ಸೂಕ್ತ ಪರಿಶೀಲನೆ ನಡೆಸದೆ ಎಫ್ಸಿ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಅಕ್ರಮದ ಕುರಿತು ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ. ಇದರ ಬೆನ್ನಲ್ಲೇ ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಕೇಶ್ ಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 336(2), 336(3) ಮತ್ತು 340(2) ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.