ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ ಎಸಗಿದಾತ ತಲೆಮರೆಸಿಕೊಂಡಿದ್ದ ಆರೋಪಿ ಸತೀಶ್ ಪಾತ್ರಿಯನ್ನು ಒಂದು ತಿಂಗಳ ಬಳಿಕ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಹೌದು .. ಕಳೆದ ಕೆಲ ತಿಂಗಳ ಹಿಂದೆ ನಾಪತ್ತೆಯಾಗಿದ್ದು ಮಹಿಳೆಯ ಮೂಢ ನಂಬಿಕೆಯನ್ನೇ ಬಳಸಿಕೊಂಡ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು. ಮಹಿಳೆಯ ದೂರಿನ ಮೇರೆಗೆ ಆರೋಪಿ ಸತೀಶ್ ಪಾತ್ರಿಯನ್ನು ಕೊಪ್ಪ ಠಾಣೆ ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಕೊನೆಗೂ ಬಂಧಿಸಿದ್ದಾರೆ.
ದೆವ್ವ ಬಿಡಿಸುವುದಾಗಿ ಹೇಳಿ ಹಾಸನ ಮೂಲದ ಮಹಿಳೆಯ ಮೇಲೆ ಆರೋಪಿ ಸತೀಶ್ ಪಾತ್ರಿ ನಿರಂತರವಾಗಿ ಅತ್ಯಾಚಾರವೆಸಿದ್ದ. ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಹಾಗೂ ತೀರ್ಥಹಳ್ಳಿಯ ಕುದುರೆಗುಂಡಿಗೆ ಕರೆದೊಯ್ದು ಈ ಕೃತ್ಯ ಎಸಗಿರುವುದಾಗಿ ಮಹಿಳೆ ಆರೋಪಿಸಿದ್ದರು. ಈ ಬಗ್ಗೆ ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು. ತನ್ನ ಮೇಲೆ ಎಫ್ಐಆರ್ ಆಗುತ್ತಿದ್ದಂತೆ ಪರಾರಿಯಾಗಿದ್ದ ಸತೀಶ್.
ಪೊಲೀಸರಿಂದ ತಲೆಮರೆಸಿಕೊಂಡಿದ್ದ ಸತೀಶ್ ಪಾತ್ರಿಗೆ ಪೊಲೀಸ್ ಇಲಾಖೆಯೊಳಗಿನಿಂದಲೇ ರಕ್ಷಣೆ ದೊರೆಯುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. ಎನ್.ಆರ್. ಪುರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಕಾಂತೇಶ್ ಎಂಬಾತನೇ ಆರೋಪಿಗೆ ಠಾಣೆಯ ಪ್ರತಿ ಕ್ಷಣದ ಮಾಹಿತಿಯನ್ನು ರವಾನಿಸುತ್ತಿದ್ದನು. ಪೊಲೀಸರು ದಾಳಿಗೆ ಬರುವ ಮುಂಚೆಯೇ ಸಿಬ್ಬಂದಿಯಿಂದ ಮಾಹಿತಿ ಪಡೆದು ಆರೋಪಿ ಜಾಗ ಬದಲಾಯಿಸುತ್ತಿದ್ದನು ಎಂದು ಹೇಳಲಾಗಿದೆ. ಈ ಮಾಹಿತಿ ಸೋರಿಕೆ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಸ್‌ಪಿ ಜಿತೇಂದ್ರ ಕುಮಾರ್ ದಯ್ಮಾ ಅವರು ಕರ್ತವ್ಯಲೋಪ ಎಸಗಿದ ಪೇದೆ ಕಾಂತೇಶ್‌ನನ್ನು ಅಮಾನತುಗೊಳಿಸಿ ಕಠಿಣ ಕ್ರಮ ಕೈಗೊಂಡಿದ್ದಾರೆ.
