Wednesday, October 14, 2026
Homeಗ್ರೇಟರ್ ಬೆಂಗಳೂರುನಿಲ್ಲಿಸಿದ್ದ ರೈಲಿನ ಮೂರು ಬೋಗಿಗಳಿಗೆ ತಗುಲಿದ ಬೆಂಕಿ: ಸಂಚಾರವನ್ನು ತಾತ್ಕಾಲಿಕ ಸ್ಥಗಿತ!

ನಿಲ್ಲಿಸಿದ್ದ ರೈಲಿನ ಮೂರು ಬೋಗಿಗಳಿಗೆ ತಗುಲಿದ ಬೆಂಕಿ: ಸಂಚಾರವನ್ನು ತಾತ್ಕಾಲಿಕ ಸ್ಥಗಿತ!

Telegram Group
Join Now

ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ರಾಜಾನುಕುಂಟೆಯಲ್ಲಿ ನಿಲ್ಲಿಸಿದ್ದ ರೈಲಿನ ಮೂರು ಬೋಗಿಗಳಿಗೆ ಬೆಂಕಿ ತಗುಲಿರುವ ಘಟನೆ ನಡೆದಿದೆ.

ಬೆಳಗ್ಗೆ ಸುಮಾರು 10:30ರ ವೇಳೆಗೆ ಯಾರ್ಡ್‌ನಲ್ಲಿ ನಿಲ್ಲಿಸಿದ್ದ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ

ಮಾಕ್ ಡ್ರಿಲ್‌ಗಾಗಿ ಬಳಸಲಾಗುತ್ತಿದ್ದ ಈ ಮೂರು ಬೋಗಿಗಳನ್ನು ಹಲವು ದಿನಗಳಿಂದ ಯಾರ್ಡ್‌ನಲ್ಲಿ ನಿಲ್ಲಿಸಲಾಗಿತ್ತು. ಬೋಗಿಗಳು ರೈಲ್ವೆ ಹಳಿಯ ಮೇಲೆ ಇರಲಿಲ್ಲ. ಅಲ್ಲದೆ, ಬೋಗಿಗಳಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ.

ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದ ಬೆಂಕಿ, ಬಳಿಕ ವೇಗವಾಗಿ ವ್ಯಾಪಿಸಿದೆ. ಬೆಂಕಿಯ ಪರಿಣಾಮ ಎರಡು ಕೋಚ್‌ಗಳಿಗೆ ತೀವ್ರ ಹಾನಿಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಬೋಗಿಗಳಿಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ರೈಲ್ವೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!