ಮೂಡಿಗೆರೆ: ಮುಬರುವ ತಾಲೂಕು ಪಂಚಾಯಿತಿ ಚುನಾವಣೆಗೆ ಕಸಬಾ–ದಾರದಹಳ್ಳಿ ಕ್ಷೇತ್ರದಿಂದ ಬ್ರಿಜೇಶ್ ಕಡಿದಾಳು ಅವರು ಪ್ರಬಲ ಆಕಾಂಕ್ಷಿ ಎಂಬುದಾಗಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು 2016ರಲ್ಲೇ ಸ್ಪರ್ಧೆಗೆ ಹಸಿರು ನಿಶಾನೆ ಪಡೆದಿದ್ದ ಯುವ ಮುಖಂಡನಾಗಿದ್ದು ಸಾಮಾಜಿಕ ಸೇವೆ ಹಾಗೂ ರಾಜಕೀಯ ಅನುಭವವೇ ನನ್ನ ಬಲವಾಗಿದೆ ಎಂದರು
ಮುಂಬರುವ ಮೂಡಿಗೆರೆ ತಾಲೂಕು ಪಂಚಾಯಿತಿ ಚುನಾವಣೆಗೆ ಕಸಬಾ–ದಾರದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಪ್ರಬಲ ಆಕಾಂಕ್ಷಿಯಾಗಿ ಗುರುತಿಸಿಕೊಂಡಿರುವ ಇವರು ರಾಜಕೀಯ ವಲಯದಲ್ಲಿ ಗಮನ ಸೆಳೆಯುತ್ತಿದ್ದಾರೆ.
ಈ ಹಿಂದೆ 2016ರಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಚಿಕ್ಕಮಗಳೂರು ಜಿಲ್ಲಾ ಕಿಸಾನ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ, ಅಂದಿನ ಕಾಂಗ್ರೆಸ್ ಸರ್ಕಾರದ ಗೃಹ ಸಚಿವರಾಗಿದ್ದ ಡಾ. ಜಿ. ಪರಮೇಶ್ವರ್ ಅವರು ಇದೇ ಕ್ಷೇತ್ರದಿಂದ ತಾಲೂಕು ಪಂಚಾಯಿತಿಗೆ ಸ್ಪರ್ಧಿಸಲು ಹಸಿರು ನಿಶಾನೆ ನೀಡಿದ್ದರು ಆದರೆ, ಕೆಲವು ಕಾರಣಗಳಿಂದಾಗಿ ಅಂದು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ.
ರಾಜಕೀಯ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಇವರು, ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ದುಡಿದ ಅನುಭವ ಹೊಂದಿದ್ದಾರೆ ಹಾಗೂ ಕೊಡುಗೆ ದಾನಿಯಾಗಿದ್ದು. ತಾವು ವಿದ್ಯಾಭ್ಯಾಸ ಮಾಡಿದ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವುದರ ಜೊತೆಗೆ, ಸಾರ್ವಜನಿಕ ಕ್ಷೇತ್ರದಲ್ಲಿಯೂ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ.
ವಿಶಾಲ ಸ್ನೇಹ ಬಳಗವನ್ನು ಹೊಂದಿರುವ ಇವರು, ರಾಜಕೀಯ ನಾಯಕರು, ಗುರುಹಿರಿಯರು ಹಾಗೂ ಸಾರ್ವಜನಿಕರ ಪ್ರೀತಿ-ವಿಶ್ವಾಸವನ್ನು ಗಳಿಸಿದ್ದಾರೆ. ಈ ಎಲ್ಲ ಅನುಭವಗಳು ಮುಂಬರುವ ತಾಲೂಕು ಪಂಚಾಯಿತಿ ಚುನಾವಣೆಯ ಸ್ಪರ್ಧಾಕಾಂಕ್ಷೆಗೆ ಬಲ ನೀಡುತ್ತಿವೆ ಎಂದರು
ಮೂಡಿಗೆರೆ ತಾಲೂಕು ಪಂಚಾಯಿತಿ ಚುನಾವಣೆಯ ಕಾವು ನಿಧಾನವಾಗಿ ಹೆಚ್ಚುತ್ತಿರುವ ಬೆನ್ನಲ್ಲೇ, ಕಸಬಾ–ದಾರದಹಳ್ಳಿ ಕ್ಷೇತ್ರದಲ್ಲಿ ಈ ಮುಖಂಡರ ಮುಂದಿನ ರಾಜಕೀಯ ನಡೆ ಕುತೂಹಲ ಮೂಡಿಸಿದೆ. ಪ್ರಸ್ತುತವಾಗಿ ಬಿಜೆಪಿ ಪಕ್ಷದಲ್ಲಿ ಕಾರ್ಯಕರ್ತರಾಗಿ ಹಾಗೂ ಮಾಜಿ ಎಂಎಲ್ಸಿ ಎಂ ಕೆ ಪ್ರಾಣೇಶ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು ಸ್ಪರ್ಧಿಸುವ ಅವಕಾಶ ದೊರೆಯುತ್ತದೆಯೇ? ಅಥವಾ ಚುನಾವಣಾ ಕಣಕ್ಕೆ ಇಳಿಯುವ ವಿಚಾರದಲ್ಲಿ ಬೇರೆ ನಿರ್ಧಾರ ಕೈಗೊಳ್ಳುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
