Thursday, October 15, 2026
Homeಜಿಲ್ಲಾಸುದ್ದಿJeevraj V/S Rajegowda: ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್...

Jeevraj V/S Rajegowda: ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

Telegram Group
Join Now

ಶೃಂಗೇರಿ : ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮರುಮತ ಎಣಿಕೆ ಪ್ರಶ್ನಿಸಿ ಶಾಸಕ ರಾಜೇಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಚುನಾವಣಾ ಆಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

2023ರ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಮೂಲ ವಿಡಿಯೋವನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ತಾಕೀತು ಮಾಡಿರುವ ಪೀಠ, ಅಗತ್ಯ ದಾಖಲೆಗಳನ್ನು ಸಲ್ಲಿಸದಿದ್ದರೆ ಚುನಾವಣಾ ಆಯೋಗದ ವಿರುದ್ಧ ಪ್ರತಿಕೂಲ ಅಭಿಪ್ರಾಯ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ

ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠದ ಮುಂದೆ ಪ್ರಕರಣದ ವಿಚಾರಣೆ ನಡೆಯಿತು. ಈ ವೇಳೆ ಮರುಮತ ಎಣಿಕೆಯ ವೀಡಿಯೋವನ್ನು ಒದಗಿಸಲಾಗಿದ್ದರೂ, 2023ರ ಮೂಲ ಮತ ಎಣಿಕೆಯ ವೀಡಿಯೋ ಲಭ್ಯವಾಗುತ್ತಿಲ್ಲ ಎಂದು ಚುನಾವಣಾ ಆಯೋಗದ ಪರವಾಗಿ ತಿಳಿಸಲಾಯಿತು. ಮೂಲ ವೀಡಿಯೋ ಎಲ್ಲಿ? ಮೂಲ ವೀಡಿಯೋ ಲಭ್ಯವಿಲ್ಲ ಎಂಬ ಚುನಾವಣಾ ಆಯೋಗದ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಮೂಲ ವೀಡಿಯೋವನ್ನು ಹಾಜರುಪಡಿಸುವುದು ಹೇಗೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿತು.

ಸಂಬಂಧಪಟ್ಟ ಅಧಿಕಾರಿಗಳು ವರ್ಗಾವಣೆಯಾಗಿರುವುದರಿಂದ ದಾಖಲೆಗಳನ್ನು ಒದಗಿಸುವುದು ಕಷ್ಟವಾಗುತ್ತಿದೆ ಎಂಬ ಆಯೋಗದ ವಾದವನ್ನು ಪೀಠ ಒಪ್ಪಲಿಲ್ಲ. ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 15ಕ್ಕೆ ಮುಂದೂಡಿಕೆ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!